Featured

ಮಂಗಳೂರು: ಗ್ರಾ. ಪಂ. ಚುನಾವಣೆ ; ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ : ಇವಿಎಂ ಬಳಕೆಯಿಲ್ಲ : ಜಿಲ್ಲಾಧಿಕಾರಿ ಡಾ.ರಾಜೇಂದ್ರ -Vishwanews24

ಮಂಗಳೂರು: ಗ್ರಾ. ಪಂ. ಚುನಾವಣೆ ; ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ : ಇವಿಎಂ ಬಳಕೆಯಿಲ್ಲ : ಜಿಲ್ಲಾಧಿಕಾರಿ ಡಾ.ರಾಜೇಂದ್ರ -Vishwanews24

ಮಂಗಳೂರು,: ದ.ಕ.ಜಿಲ್ಲೆಯ 220 ಗ್ರಾಪಂಗಳ‌ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ, ಇವಿಎಂ ಬಳಕೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ‌ ತಿಳಿಸಿದರು.

ತನ್ನ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ ಎಂದರು.

ಜಿಲ್ಲೆಯ 7 ತಾಲೂಕುಗಳಲ್ಲಿ 1527 ಮತಗಟ್ಟೆಗಳನ್ನು ತೆಗೆಯಲಾಗುವುದು. ಆ ಪೈಕಿ 397 ಸೂಕ್ಷ್ಮ ಮತ್ತು 198 ಅತಿ ಸೂಕ್ಷ್ಮ ಹಾಗೂ 931 ಸಾಮಾನ್ಯ ಮತಗಟ್ಟೆಗಳಿವೆ. ಅಲ್ಲದೆ 2626 ಮತಪೆಟ್ಟಿಗೆಗಳನ್ನು‌ ಅಳವಡಿಸಲಾಗುವುದು ಎಂದು ಡಿಸಿ ಹೇಳಿದರು.

ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ. ಅಲ್ಲದೆ 220 ಚುನಾವಣಾ ಅಧಿಕಾರಿ ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗುವುದು. ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.

ಮತಪತ್ರಗಳ ಮುದ್ರಣಕ್ಕೆ ಸಂಬಂಧಿಸಿದಂತೆ ‌ಸಹಾಯಕ ಆಯುಕ್ತರು‌ ಮತ್ತು ತಹಶಿಲ್ದಾರರಿಗೆ ಜವಾಬ್ದಾರಿ ವಹಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಲು ಕ್ರಮ ಜರುಗಿಸಲಾಗುವುದು, ಅಲ್ಲದೆ ಮತಗಟ್ಟೆಗಳ ಸಂಖ್ಯೆಯನ್ನೂ‌ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ‌ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಎಡಿಸಿ ರೂಪಾ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago