ಮಂಗಳೂರು,: ದ.ಕ.ಜಿಲ್ಲೆಯ 220 ಗ್ರಾಪಂಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ, ಇವಿಎಂ ಬಳಕೆ ಇಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದರು.
ತನ್ನ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ 106 ಮತ್ತು ಎರಡನೆ ಹಂತದಲ್ಲಿ 114 ಗ್ರಾಪಂಗಳಿಗೆ ಚುನಾವಣೆ ನಡೆಯಲಿದೆ ಎಂದರು.
ಜಿಲ್ಲೆಯ 7 ತಾಲೂಕುಗಳಲ್ಲಿ 1527 ಮತಗಟ್ಟೆಗಳನ್ನು ತೆಗೆಯಲಾಗುವುದು. ಆ ಪೈಕಿ 397 ಸೂಕ್ಷ್ಮ ಮತ್ತು 198 ಅತಿ ಸೂಕ್ಷ್ಮ ಹಾಗೂ 931 ಸಾಮಾನ್ಯ ಮತಗಟ್ಟೆಗಳಿವೆ. ಅಲ್ಲದೆ 2626 ಮತಪೆಟ್ಟಿಗೆಗಳನ್ನು ಅಳವಡಿಸಲಾಗುವುದು ಎಂದು ಡಿಸಿ ಹೇಳಿದರು.
ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ. ಅಲ್ಲದೆ 220 ಚುನಾವಣಾ ಅಧಿಕಾರಿ ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನಿಯುಕ್ತಿಗೊಳಿಸಲಾಗುವುದು. ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದು ಅವರು ಹೇಳಿದರು.
ಮತಪತ್ರಗಳ ಮುದ್ರಣಕ್ಕೆ ಸಂಬಂಧಿಸಿದಂತೆ ಸಹಾಯಕ ಆಯುಕ್ತರು ಮತ್ತು ತಹಶಿಲ್ದಾರರಿಗೆ ಜವಾಬ್ದಾರಿ ವಹಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸುರಕ್ಷಿತ ಅಂತರ ಕಾಪಾಡಲು ಕ್ರಮ ಜರುಗಿಸಲಾಗುವುದು, ಅಲ್ಲದೆ ಮತಗಟ್ಟೆಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಎಡಿಸಿ ರೂಪಾ ಉಪಸ್ಥಿತರಿದ್ದರು.
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಬಂಟ್ವಾಳ : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಯುವಕನೋರ್ವನ ಮೃತದೇಹ ಗುರುವಾರ ಪತ್ತೆಯಾಗಿದೆ.…
ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…
ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ : ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…
ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…