ಮಂಗಳೂರು : ಹೈರಿಸ್ಕ್ ದೇಶವಾಗಿರುವ ಘಾನದಿಂದ ಆಗಮಿಸಿದ ಪ್ರಯಾಣಿಕರೊಬ್ಬರಲ್ಲಿ ರ್‍ಯಾಪಿಡ್ ಆರ್.ಟಿ.ಪಿ.ಸಿ.ಆರ್. ತಪಾಸಣೆ ವೇಳೆ ಪಾಸಿಟಿವ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೆಂದ್ರ ಕೆ.ವಿ. ಅವರು ತುರ್ತಾಗಿ ಮಂಗಳೂರು ಏರ್ ಪೋರ್ಟ್ ಮುಖ್ಯಸ್ಥರು, ಏರ್ ಪೋರ್ಟ್ ಆರೋಗ್ಯಾಧಿಕಾರಿ (ಎ.ಪಿ.ಹೆಚ್.ಓ), ಜಿಲ್ಲಾ ಸರ್ವೇಕ್ಷಾಣಾಧಿಕಾರಿ (ಡಿ.ಎಸ್.ಓ), ಕೋವಿಡ್ ನೋಡಲ್ ಅಧಿಕಾರಿ ಹಾಗೂ ಅಪೋಲೋ ಲ್ಯಾಬ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದರು.
ಅವರು ಡಿ. 17ರ ಶುಕ್ರವಾರ ಮಧ್ಯಾಹ್ನ ಏರ್ ಪೋರ್ಟ್‍ನ ಕಾನ್ಫರೆನ್ಸ್ ಸಭಾಂಗಣದಲ್ಲಿ ಹಮ್ಮಿಕೊಂಡ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸವಿಸ್ತಾರವಾಗಿ ಚರ್ಚಿಸಿ, ಘಾನ ದೇಶದಿಂದ ಬಂದ ಪ್ರಯಾಣಿಕರೊಬ್ಬರನ್ನು ನಿನ್ನೆ ರಾತ್ರಿಯೇ ವೆನ್‍ಲಾಕ್ ಆಸ್ಪತ್ರೆಯ ಐಸೋಲೇಶನ್ ವಾರ್ಡ್‍ಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಪ್ರಯಾಣಿಕರಲ್ಲಿ ಯಾವುದೇ ರೋಗ ಲಕ್ಷಣ ಕಂಡು ಬಂದಿರುವುದಿಲ್ಲ. ಆ ಪ್ರಯಾಣಿಕ ಆಸೀನವಾಗಿದ್ದ 3 ಸಾಲಿನ ಎದುರು ಹಾಗೂ 3 ಸಾಲಿನ ಹಿಂದಿನ ಪ್ರಯಾಣಿಕರು ಸೇರಿದಂತೆ ಒಟ್ಟು 27 ಪ್ರಯಾಣಿಕರನ್ನು ಪ್ರಾಥಮಿಕ ಸಂಪರ್ಕಿತರೆಂದು ಗುರುತಿಸಿ ಅವರನ್ನು ಆರೋಗ್ಯ ಇಲಾಖೆಯಿಂದ ರ್ಯಾಪಿಡ್ ಆರ್.ಟಿ.ಪಿ.ಸಿ.ಆರ್ ಮತ್ತು ರ್ಯಾಂಡಮೈಸ್ ಪರೀಕ್ಷೆಗೆ ಒಳಪಡಿಸಿ, ಅವರನ್ನು ಕ್ವಾರಂಟೈನ್ ಮಾಡಲಾಗಿದೆ. ಪಾಸಿಟಿವ್ ಬಂದಿರುವ ಪ್ರಯಾಣಿಕರ ಗಂಟಲು ದ್ರವ್ಯ ಮಾದರಿಯನ್ನು ಜನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಬೆಂಗಳೂರಿಗೆ ಈಗಾಗಲೇ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿ ಪಡೆದುಕೊಂಡಿದ್ದಾರೆ.
ಜಿಲ್ಲಾಧಿಕಾರಿಯವರು ವಿಮಾನ ನಿಲ್ದಾಣದ ಅಧಿಕಾರಿಯೊಂದಿಗೆ ಆರ್.ಟಿ.ಪಿ.ಸಿ.ಆರ್. ಪರೀಕ್ಷೆ, ಇಮಿಗ್ರಿಯೇಶನ್, ಏರ್‍ಸುವಿಧಾ, ಚೆಕ್ಕಿಂಗ್ ಪಾಯಿಂಟ್, ಟ್ರಾನ್‍ಸಿಟ್ ಪ್ಯಾಸಿಂಜರ್ ಹಾಗೂ ರ್ಯಾಂಡಮೈಸ್ ಪರೀಕ್ಷೆಗಳ ಬಗ್ಗೆಯೂ ವಿವರವಾಗಿ ತಿಳಿದುಕೊಂಡು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಚೀಫ್ ಏರ್‍ಪೋರ್ಟ್ ಆಫೀಸರ್ ನೀರವ್ ಶಾ, ಕೋವಿಡ್ ನೋಡಲ್ ಅಧಿಕಾರಿ ಡಾ. ಎಚ್. ಅಶೋಕ್, ಏರ್‍ಲೈನ್ ಸ್ಟೇಷನ್ ಮ್ಯಾನೇಜರ್ಸ್, ಟರ್ಮಿನಲ್ ಮ್ಯಾನೇಜರ್, ಇಮಿಗ್ರಿಯೇಶನ್ ಆಫೀಸರ್ಸ್ ಹಾಗೂ ಸಂಬಂಧಿಸಿದ ಅಧಿಕಾರಿಗಳಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…