ಮಂಗಳೂರು: ಚಲಿಸುತ್ತಿದ್ದ ಓಮ್ನಿ ವ್ಯಾನ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಹಿಂದಿನಿಂದ ಬರುತ್ತಿದ್ದ ವಾಹನ ಸವಾರರ ಸಮಯಪ್ರಜ್ಞೆಯಿಂದಾಗಿ ಚಾಲಕ ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಕೋಟೆಕಾರಿನ ಅಡ್ಕ ಎಂಬಲ್ಲಿ ಗುರುವಾರ ಸಂಭವಿಸಿದೆ.
ತಲಪಾಡಿ ನಿವಾಸಿ ರಿಯಾಜ್ ಎಂಬವರು ಗುರುವಾರ ಮಧ್ಯಾಹ್ನ ಅಡ್ಕದ ಗ್ಯಾರೇಜ್‌ನಿಂದ ರಿಪೇರಿ ಮುಗಿದಿದ್ದ ತಮ್ಮ ವ್ಯಾನ್ ಅನ್ನು ಪಡೆದುಕೊಂಡು ಬರುತ್ತಿದ್ದರು. ಪೆಟ್ರೋಲ್ ಬಂಕ್‌ನಲ್ಲಿ ಇಂಧನ ತುಂಬಿಸಿ ತಲಪಾಡಿಯತ್ತ ತೆರಳುತ್ತಿದ್ದಾಗ ವಾಹನದಲ್ಲಿ ಹೊಗೆ ಕಾಣಿಸಿಕೊಂಡಿದೆ. ಆದರೆ, ವಾಹನಕ್ಕೆ ಬೆಂಕಿ ತಗುಲಿರುವುದು ರಿಯಾಜ್ ಅವರ ಗಮನಕ್ಕೆ ಬಂದಿರಲಿಲ್ಲ. ಈ ವೇಳೆ ಹಿಂದಿನಿಂದ ಬರುತ್ತಿದ್ದ ಮತ್ತೊಬ್ಬ ವಾಹನ ಸವಾರರು ಬೆಂಕಿ ಕಾಣಿಸಿಕೊಂಡ ಬಗ್ಗೆ ರಿಯಾಜ್ ಅವರನ್ನು ಎಚ್ಚರಿಸಿದ್ದಾರೆ.
ಇದನ್ನೂ ಓದಿ:
ಕೂಡಲೇ ರಿಯಾಜ್ ಅವರು ಹೈವೇ ಪಕ್ಕದಲ್ಲಿ ವಾಹನ ನಿಲ್ಲಿಸಿ ಹೊರಬಂದಿದ್ದಾರೆ. ಅವರು ವಾಹನದಿಂದ ಇಳಿಯುತ್ತಿದ್ದಂತೆಯೇ ಇಡೀ ವ್ಯಾನ್ ಬೆಂಕಿಗೆ ತುತ್ತಾಗಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…