Featured

ಮಂಗಳೂರು : ಚಾರ್ಮಾಡಿ ಘಾಟ್ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

ಮಂಗಳೂರು : ಚಾರ್ಮಾಡಿ ಘಾಟಿಯಲ್ಲಿ ಸಂಚಾರಕ್ಕೆ ಮತ್ತೆ ನಿರ್ಬಂಧ -Vishwanews24

ಮಂಗಳೂರು : ಚಿಕ್ಕಮಗಳೂರು ಜಿಲ್ಲಾಧಿಕಾರಿ ರಾಷ್ಟ್ರೀಯ ಹೆದ್ದಾರಿ 73ರ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿದ್ದ ಬುಧವಾರ ಹೊರಡಿಸಿದ್ದ ಆದೇಶವನ್ನು ಗುರುವಾರ ಹಿಂಪಡೆದಿದ್ದಾರೆ.

ಭಾರೀ ಮಳೆಯಿಂದ ಚಾರ್ಮಾಡಿ ಘಾಟ್ ಹೆದ್ದಾರಿಯಲ್ಲಿ ಭಾರೀ ಭೂಕುಸಿತವಾಗಿತ್ತು. ಪರಿಣಾಮ ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಚಿಕ್ಕಮಗಳೂರಿನಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ದಕ್ಷಿಣ ಕನ್ನಡ ಜಿಲ್ಲೆಯತ್ತ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಚಾರ್ಮಾಡಿ ಘಾಟ್‍ನ ಹೆದ್ದಾರಿಯಲ್ಲಿ ಕೈಗೊಳ್ಳಲಾಗಿದ್ದ ರಸ್ತೆ ದುರಸ್ತಿ ಕಾಮಗಾರಿಗಳು ಪೂರ್ಣಗೊಂಡಿದ್ದರಿಂದ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಬುಧವಾರ ಈ ರಸ್ತೆಯಲ್ಲಿ 6 ಚಕ್ರಕ್ಕೂ ಹೆಚ್ಚು ಚಕ್ರಗಳ ವಾಹನಗಳನ್ನು ಹೊರತು ಪಡಿಸಿ ಉಳಿದೆಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಹೆದ್ದಾರಿಯನ್ನು ಮುಕ್ತಗೊಳಿಸಿ ಆದೇಶ ಹೊರಡಿಸಿದ್ದರು.

ಇದನ್ನೂ ಓದಿ : ಮಂಗಳೂರು : ಅನಾಥೆಯಾಗಿ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾಗಿದ್ದ ಈಕೆಗೆ ಪೊಲೀಸ್ ಠಾಣೆಯೇ ಆಸರೆ -Vishwanews24

ಆದರೆ ದ.ಕ ಜಿಲ್ಲೆಯ ವ್ಯಾಪ್ತಿಯ ಕಾಮಗಾರಿ ಅಪೂರ್ಣವಾಗಿರುವುದರಿಂದ, ಸಂಚಾರಕ್ಕೆ ತಾತ್ಕಲಿಕ ತಡೆಯೊಡ್ಡುವ ಹಾಗೂ ಆದೇಶ ಹಿಂಪಡೆಯುವಂತೆ ದ.ಕ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಮನವಿ ಮಾಡಿದ್ದು ಈ ಮೇರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಅವರು ಗುರುವಾರ ಚಾರ್ಮಾಡಿ ಘಾಟ್ ರಸ್ತೆಯನ್ನು ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸುವ ಆದೇಶವನ್ನು ಹಿಂಪಡೆದಿದ್ದಾರೆಂದು ತಿಳಿದು ಬಂದಿದೆ

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

22 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago