ಮಂಗಳೂರು: ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರೋಗಿ ಮೃತಪಟ್ಟು ಅವರ ಪತ್ನಿ, ಮಗ ಹಾಗೂ ಸಂಬಂಧಿಕರೋರ್ವ ಗಾಯಗೊಂಡ ಘಟನೆ ಸೆ. 25 ರಂದು ಬುಧವಾರ ಮುಂಜಾನೆ ಮಂಗಳೂರಿನ ಪಡೀಲ್ ಸಮೀಪ ನಡೆದಿದೆ.
ಮೃತ ರೋಗಿಯನ್ನು ಹಳೆನೇರೆಂಕಿ ಗ್ರಾಮದ ರಾಮಜಾಲು ನಿವಾಸಿ ದಾಸಪ್ಪ ರೈ (73) ಎಂದು ಗುರುತಿಸಲಾಗಿದೆ.
ಹಳೆನೇರೆಂಕಿ ಗ್ರಾಮದ ಕದ್ರ ನಿವಾಸಿ, ಕೂಲಿಕಾರ್ಮಿಕ ದಾಸಪ್ಪ ರೈಯವರಿಗೆ ಮಂಗಳವಾರದಂದು ತಡರಾತ್ರಿ 1.30ರ ವೇಳೆಗೆ ಸ್ಟ್ರೋಕ್ ಆಗಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಮನೆ ಸಮೀಪದ ನಿವಾಸಿ, ರಮೇಶ್ ರೈ ಎಂಬವರು ತನ್ನ ಕಾರಿನಲ್ಲಿ ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಕರೆತಂದಿದ್ದರು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ದಾಸಪ್ಪ ರೈ ಅವರನ್ನು ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ಇನ್ನೋವಾ ಆಂಬ್ಯುಲೆನ್ಸ್ ನಲ್ಲಿ ಕರೆದೊಯ್ಯಲಾಗಿತ್ತು. ಮುಂಜಾನೆ 4 ಗಂಟೆ ವೇಳೆಗೆ ಆಂಬುಲೆನ್ಸ್ ಫಸ್ಟ್ ನ್ಯೂರೋ ಆಸ್ಪತ್ರೆಗೆ ಸಮೀಪ ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ವಿದ್ಯುತ್ ಕಂಬಕ್ಕೆ ಗುದ್ದಿದೆ. ಘಟನೆಯಲ್ಲಿ ಆಂಬುಲೆನ್ಸ್ ನಲ್ಲಿದ್ದ ರೋಗಿ ದಾಸಪ್ಪ ರೈ ಸ್ಥಳದಲ್ಲೇ ಮೃತಪಟ್ಟಿದ್ದು ಅವರ ಪತ್ನಿ ನಳಿನಿ ರೈ ಪುತ್ರ ಹರ್ಷಿತ್(33) ಹಾಗೂ ಸಂಬಂಧಿಕ ಯುವಕ ಮನೀಷ್(24)ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…