Featured

ಮಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ -ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ ವಶಕ್ಕೆ – Vishwanews24

ಮಂಗಳೂರು : ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ -ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ ವಶಕ್ಕೆ

ಮಂಗಳೂರು: ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋಡಾರ್-ಎಡಪದವು ಚೆಕ್‌ಪೋಸ್ಟ್‌ನಲ್ಲಿ ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳ ತಂಡ ರವಿವಾರ ರಾತ್ರಿ ವಶಪಡಿಸಿಕೊಂಡಿದೆ.

ಚೆಕ್‌ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳ ತಂಡ ವಾಹನಗಳ ತಪಾಸಣೆ ನಡೆಸುತ್ತಿದ್ದು, ರಾತ್ರಿ 11ರ ಸುಮಾರಿಗೆ ಕೈಕಂಬ ನಿವಾಸಿಯೊಬ್ಬರು ಕಾರಿನಲ್ಲಿ ಆಗಮಿಸಿದಾಗ ಅಧಿಕಾರಿಗಳು ವಾಹನ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ 1.32 ಲಕ್ಷ ರೂ.ಗಳಿಗೆ ದಾಖಲೆ ನೀಡಲು ವಿಫಲವಾದ ಕಾರಣ ಆ ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಕುರಿತಂತೆ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಕೆ.ಜಾನ್ಸನ್ ಅವರು ‘ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ 50 ಸಾವಿರ ರೂ.ಗಳಿಗಿಂತ ಹೆಚ್ಚು ಹಣ ಸಾಗಿಸುವಂತಿಲ್ಲ. ಹೆಚ್ಚು ಹಣ ಸಾಗಿಸುವಾಗ ಸರಿಯಾದ ದಾಖಲೆ ಒದಗಿಸಬೇಕು. 50 ಸಾವಿರಕ್ಕಿಂತ ಹೆಚ್ಚು ಹಣ ಸಾಗಿಸಿದಾಗ ದಾಖಲೆ ನೀಡದಿದ್ದರೆ ಅದನ್ನು ವಶಕ್ಕೆ ಪಡೆಯಲಾಗುತ್ತದೆ. ಸಂಬಂಧಪಟ್ಟವರು ದಾಖಲೆಯನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರ ಅಪೀಲು ಕಮಿಟಿಗೆ ಮನವಿ ಸಲ್ಲಿಸಿ ಹಣ ವಾಪಾಸ್ ಪಡೆಯಲೂ ಅವಕಾಶ ಇದೆ ಎಂದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago