ಮಂಗಳೂರು: ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತೋಡಾರ್-ಎಡಪದವು ಚೆಕ್‌ಪೋಸ್ಟ್‌ನಲ್ಲಿ ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1.32 ಲಕ್ಷ ರೂ. ನಗದನ್ನು ಚುನಾವಣಾಧಿಕಾರಿಗಳ ತಂಡ ರವಿವಾರ ರಾತ್ರಿ ವಶಪಡಿಸಿಕೊಂಡಿದೆ.
ಚೆಕ್‌ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳ ತಂಡ ವಾಹನಗಳ ತಪಾಸಣೆ ನಡೆಸುತ್ತಿದ್ದು, ರಾತ್ರಿ 11ರ ಸುಮಾರಿಗೆ ಕೈಕಂಬ ನಿವಾಸಿಯೊಬ್ಬರು ಕಾರಿನಲ್ಲಿ ಆಗಮಿಸಿದಾಗ ಅಧಿಕಾರಿಗಳು ವಾಹನ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ 1.32 ಲಕ್ಷ ರೂ.ಗಳಿಗೆ ದಾಖಲೆ ನೀಡಲು ವಿಫಲವಾದ ಕಾರಣ ಆ ಹಣವನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತಂತೆ ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿದ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ಸಹಾಯಕ ಚುನಾವಣಾಧಿಕಾರಿ ಕೆ.ಜಾನ್ಸನ್ ಅವರು ‘ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ 50 ಸಾವಿರ ರೂ.ಗಳಿಗಿಂತ ಹೆಚ್ಚು ಹಣ ಸಾಗಿಸುವಂತಿಲ್ಲ. ಹೆಚ್ಚು ಹಣ ಸಾಗಿಸುವಾಗ ಸರಿಯಾದ ದಾಖಲೆ ಒದಗಿಸಬೇಕು. 50 ಸಾವಿರಕ್ಕಿಂತ ಹೆಚ್ಚು ಹಣ ಸಾಗಿಸಿದಾಗ ದಾಖಲೆ ನೀಡದಿದ್ದರೆ ಅದನ್ನು ವಶಕ್ಕೆ ಪಡೆಯಲಾಗುತ್ತದೆ. ಸಂಬಂಧಪಟ್ಟವರು ದಾಖಲೆಯನ್ನು ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರ ಅಪೀಲು ಕಮಿಟಿಗೆ ಮನವಿ ಸಲ್ಲಿಸಿ ಹಣ ವಾಪಾಸ್ ಪಡೆಯಲೂ ಅವಕಾಶ ಇದೆ ಎಂದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…