ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆಯೂ ಜಾರಿಗೊಂಡಿದೆ. ಇದರಿಂದ ಕರಾವಳಿ ಭಾಗದಲ್ಲಿ ತರಾತುರಿಯಲ್ಲಿ ನಡೆಯುತ್ತಿದ್ದ ವಿವಿಧ ಯೋಜನೆಗಳ ಶಿಲಾನ್ಯಾಸ, ಉದ್ಘಾಟನೆ, ಹಕ್ಕುಪತ್ರ ವಿತರಣೆಯಂತಹ ಸರ್ಕಾರಿ ಕಾರ್ಯಕ್ರಮಗಳಿಗೆ ಬುಧವಾರದಿಂದಲೇ ಬ್ರೇಕ್ ಹಾಕಲಾಗಿದೆ.
ಕರ್ನಾಟಕ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯೊಂದಿಗೆ ಚುನಾವಣಾ ಮಾದರಿ ನೀತಿ ಸಂಹಿತೆಯೂ ಜಾರಿಗೊಂಡಿದೆ. ನೀತಿ ಸಂಹಿತೆ ಜಾರಿಯಲ್ಲಿರುವಾಗ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಹೀಗಾಗಿ ವಿವಿಧ ಯೋಜನೆಗಳ ಶಿಲಾನ್ಯಾಸ, ಹಕ್ಕುಪತ್ರ ವಿತರಣೆ, ಉದ್ಘಾಟನೆಯಂತಹ ಕಾರ್ಯಕ್ರಮಗಳನ್ನು ಚುನಾವಣೆ ಘೋಷಣೆಯಾದ ಬೆನ್ನಲ್ಲೇ ನಿಲ್ಲಿಸಲಾಗಿದೆ. ಜನಪ್ರತಿನಿಧಿಗಳ ಸಾಧನೆ ಸಂಬಂಧಿ ಪ್ರದರ್ಶನಗಳು, ಪೋಸ್ಟರ್, ಬ್ಯಾನರ್, ಕಟೌಟ್‌ಗಳ ತೆರವು ಕಾರ್ಯ ಕೂಡಾ ಆರಂಭಗೊಂಡಿದೆ.
ಇನ್ನು ನೀತಿ ಸಂಹಿತೆ ಹಿನ್ನೆಲೆಯಲ್ಲಿ ಶಾಸಕರು, ಸಂಸದರ ಸರ್ಕಾರಿ ಕಚೇರಿಗಳನ್ನು ಮುಚ್ಚಲಾಗಿದೆ. ಸರ್ಕಾರಿ ವಾಹನಗಳಲ್ಲಿ ಓಡಾಡುತ್ತಿದ್ದ ಜನಪ್ರತಿನಿಧಿಗಳು ಸರ್ಕಾರಿ ಕಾರು ತ್ಯಜಿಸಿ ಖಾಸಗಿ ವಾಹನಗಳಲ್ಲಿ ಓಡಾಡುತ್ತಿದ್ದಾರೆ. ಇನ್ನು ಕಾರಿಗೆ ಅಂಟಿಸಲಾಗಿರುವ ಎಂಎಲ್‌ಎ ಬೋರ್ಡ್‌ಗಳನ್ನೂ ಶಾಸಕರು ತೆರವು ಮಾಡಿದ್ದಾರೆ.
ನೀತಿ ಸಂಹಿತೆಯ ಪರಿಣಾಮಕಾರಿ ಜಾರಿಗಾಗಿ ಪೊಲೀಸರು ಎಲ್ಲೆಡೆ ಕಣ್ಗಾವಲು ಇರಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಸಹಿತ ಹಲವು ತಂಡಗಳನ್ನು ರಚಿಸಲಾಗಿದ್ದು, ವಾಹನಗಳ ತಪಾಸಣೆ ಸಹಿತ ಚುನಾವಣೆ ಅಕ್ರಮ ಉಂಟಾಗದಂತೆ ಈ ತಂಡಗಳು ಹದ್ದಿನ ಕಣ್ಣಿಟ್ಟಿದ್ದಾರೆ.
ಮೇ 21ರವರೆಗೆ ಯಾವುದೇ ಆಯುಧಗಳನ್ನು ಒಯ್ಯುವುದಕ್ಕೆ ಸಂಪೂರ್ಣ ನಿಷೇಧವಿದೆ. ಆಯುಧ ಪರವಾನಿಗೆಗಳನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿಡಲಾಗಿದೆ. ಪರವಾನಿಗೆ ಪಡೆದ ಶಸ್ತ್ರಾಸ್ತ್ರಗಳನ್ನು ಎ. 4ರೊಳಗೆ ಪೊಲೀಸ್ ಠಾಣೆಗಳಲ್ಲಿ ಅಥವಾ ಅಧಿಕೃತ ಆಯುಧ ವಿತರಕರಲ್ಲಿ ಠೇವಣಿ ಇಡಬೇಕು ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ಸೂಚಿಸಿದ್ದಾರೆ. ಒಂದು ವೇಳೆ ಆತ್ಮ ರಕ್ಷಣೆ ಮತ್ತು ಕೃಷಿ ರಕ್ಷಣೆ ಉದ್ದೇಶಕ್ಕೆ ಆಯುಧ ಅನಿವಾರ್ಯವಾಗಿದ್ದಲ್ಲಿ ಪರವಾನಿಗೆ ಅಮಾನತಿನಿಂದ ವಿನಾಯಿತಿ ಪಡೆಯಲು ಎಪ್ರಿಲ್ 4ರೊಳಗೆ ಅರ್ಜಿ ಸಲ್ಲಿಸಬೇಕು ಎಂದವರು ವಿವರಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…