ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ. ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ. ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದರು.
ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …