ಮಂಗಳೂರು, : ಕುಂಪಲಾದಲ್ಲಿನ ಅನಾಥಾಶ್ರಮವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ 52 ವರ್ಷದ ಉಸ್ತಾದ್‌ನನ್ನು 14 ವರ್ಷದ ಅಪ್ರಾಪ್ತ ಮಕ್ಕಳಿಗೆ ಮೇಲೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದಲ್ಲಿ ಏಪ್ರಿಲ್ 6 ರ ಮಂಗಳವಾರ ಬಂಧಿಸಲಾಗಿದೆ. ಬಂಧಿತನನ್ನು ಕೊಣಾಜೆ ಮೂಲದ 55 ವರ್ಷದ ಉಸ್ತಾದ್ ಅಯೂಬ್ ಎಂದು ಗುರುತಿಸಲಾಗಿದೆ.
ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ”ಮಾರ್ಚ್ 28 ರಂದು ಪೊಲೀಸ್ ಇಲಾಖೆ, ಕೆ.ಎಸ್. ಹೆಗ್ಡೆ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಕಲ್ಯಾಣ ಅಧಿಕಾರಿಗಳು ಮಂಗಳೂರು ನಗರ ಪೊಲೀಸ್ ಆಯುಕ್ತ ವ್ಯಾಪ್ತಿಯ ಮಕ್ಕಳ ಆರೈಕೆ ಕೇಂದ್ರ, ಅನಾಥಾಶ್ರಮಗಳ 480 ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮವು ಗುಡ್ ಟಚ್ ಆಂಡ್ ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಲು, ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಲು, ಮಗುವನ್ನು ಯಾವುದಾದರೂ ರೀತಿಯಲ್ಲಿ ದುರುಪಯೋಗಕ್ಕೆ ಒಳಪಡಿಸಲಾಗಿದೆಯೇ ಎಂದು ತಿಳಿಯಲು ಹಾಗೂ ಮಗುವಿನ ಜೊತೆ ಸಮಾಲೋಚನೆ ನಡೆಸಲು ಆಯೋಜಿಸಲಾಗಿತ್ತು”
”ಈ ಸಂದರ್ಭದಲ್ಲಿ ಕುಂಪಾಲದ ನೂರಾನಿ ಯತಿಮ್ ಖಾನಾ ದಾರುಲ್ ಮಸಕೀನ್‌ನಲ್ಲಿ 14 ವರ್ಷದ ಬಾಲಕ ಲೈಂಗಿಕ ಮತ್ತು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದಾನೆ ಎಂದು ತಿಳಿದು ಬಂದಿದೆ. ಮೊದಲಿಗೆ ಬಾಲಕ ಸಮಸ್ಯೆಯ ಬಗ್ಗೆ ತಿಳಿಸಿದ. ಬಳಿಕ ಎರಡು ಸುತ್ತಿನ ಸಮಾಲೋಚನೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ. ಆರು ಸಂಸ್ಥೆಗಳಲ್ಲಿ ಇಂತಹ 20 ನಿದರ್ಶನಗಳು ಬೆಳಕಿಗೆ ಬಂದವು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.
ಕುಂಪಲದ ಈ ಸಂಸ್ಥೆಯಲ್ಲೇ 4 ಪ್ರಕರಣಗಳು ದೊರೆತಿದೆ. ಮಕ್ಕಳನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
“ಗುಡ್ ಟಚ್ ಮತ್ತು ಬ್ಯಾಡ್ ಟಚ್‌ಗಳ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಹಾಗೂ ಲೈಂಗಿಕ ದೌರ್ಜನ್ಯದ ಕುರಿತು ಎಚ್ಚರಿಕೆ ನೀಡುವ ಕಾರ್ಯಕ್ರಮ” ಎಂದು ನಾವು ಮಕ್ಕಳ ಆರೈಕೆದಾರರಿಗೆ ತಿಳಿಸದೆ ಸಂಪೂರ್ಣವಾಗಿ ಗೌಪ್ಯವಾಗಿಟ್ಟು ಜಾಗೃತಿ ಕಾರ್ಯಕ್ರಮ ನಡೆಸಿದ್ದರ ಪರಿಣಾಮ ಸತ್ಯಾಂಶ ಹೊರಬಿದ್ದಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳು ಏನನ್ನೂ ಹಂಚಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಎಂಬ ಕಾರಣಕ್ಕೆ ಟಿಎಂಎ ಪೈ ಹಾಲ್‌ನಲ್ಲಿ ಕಾರ್ಯಕ್ರಮ ನಡೆಸಲಾಯಿತು ಎಂದು ಶಶಿಕುಮಾರ್ ತಿಳಿಸಿದ್ದಾರೆ.
ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…