Featured

ಮಂಗಳೂರು: ಚೈಲ್ಡ್‌ ಕೇರ್‌ ಸೆಂಟರ್‌ನಲ್ಲಿ ಮಕ್ಕಳಿಗೆ ಲೈಂಗಿಕ ಕಿರಿಕುಳ :  ಮೇಲ್ವಿಚಾರಕನಾಗಿದ್ದ 52 ವರ್ಷದ ಉಸ್ತಾದ್‌ನ ಬಂಧನ -Vishwanews24

ಮಂಗಳೂರು: ಚೈಲ್ಡ್‌ ಕೇರ್‌ ಸೆಂಟರ್‌ನಲ್ಲಿ ಮಕ್ಕಳಿಗೆ ಲೈಂಗಿಕ ಕಿರಿಕುಳ :  ಮೇಲ್ವಿಚಾರಕನಾಗಿದ್ದ 52 ವರ್ಷದ ಉಸ್ತಾದ್‌ನ ಬಂಧನ -Vishwanews24

ಮಂಗಳೂರು, : ಕುಂಪಲಾದಲ್ಲಿನ ಅನಾಥಾಶ್ರಮವೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ 52 ವರ್ಷದ ಉಸ್ತಾದ್‌ನನ್ನು 14 ವರ್ಷದ ಅಪ್ರಾಪ್ತ ಮಕ್ಕಳಿಗೆ ಮೇಲೆ ಲೈಂಗಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದಲ್ಲಿ ಏಪ್ರಿಲ್ 6 ರ ಮಂಗಳವಾರ ಬಂಧಿಸಲಾಗಿದೆ. ಬಂಧಿತನನ್ನು ಕೊಣಾಜೆ ಮೂಲದ 55 ವರ್ಷದ ಉಸ್ತಾದ್ ಅಯೂಬ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು, ”ಮಾರ್ಚ್ 28 ರಂದು ಪೊಲೀಸ್ ಇಲಾಖೆ, ಕೆ.ಎಸ್. ಹೆಗ್ಡೆ ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ಕಲ್ಯಾಣ ಅಧಿಕಾರಿಗಳು ಮಂಗಳೂರು ನಗರ ಪೊಲೀಸ್ ಆಯುಕ್ತ ವ್ಯಾಪ್ತಿಯ ಮಕ್ಕಳ ಆರೈಕೆ ಕೇಂದ್ರ, ಅನಾಥಾಶ್ರಮಗಳ 480 ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗಿತ್ತು. ಈ ಕಾರ್ಯಕ್ರಮವು ಗುಡ್‌ ಟಚ್‌ ಆಂಡ್‌ ಬ್ಯಾಡ್‌ ಟಚ್‌ ಬಗ್ಗೆ ಅರಿವು ಮೂಡಿಸಲು, ಮಕ್ಕಳ ಹಕ್ಕುಗಳ ಬಗ್ಗೆ ತಿಳಿಸಲು, ಮಗುವನ್ನು ಯಾವುದಾದರೂ ರೀತಿಯಲ್ಲಿ ದುರುಪಯೋಗಕ್ಕೆ ಒಳಪಡಿಸಲಾಗಿದೆಯೇ ಎಂದು ತಿಳಿಯಲು ಹಾಗೂ ಮಗುವಿನ ಜೊತೆ ಸಮಾಲೋಚನೆ ನಡೆಸಲು ಆಯೋಜಿಸಲಾಗಿತ್ತು”

”ಈ ಸಂದರ್ಭದಲ್ಲಿ ಕುಂಪಾಲದ ನೂರಾನಿ ಯತಿಮ್‌ ಖಾನಾ ದಾರುಲ್ ಮಸಕೀನ್‌ನಲ್ಲಿ 14 ವರ್ಷದ ಬಾಲಕ ಲೈಂಗಿಕ ಮತ್ತು ದೈಹಿಕ ಕಿರುಕುಳಕ್ಕೆ ಒಳಗಾಗಿದ್ದಾನೆ ಎಂದು ತಿಳಿದು ಬಂದಿದೆ. ಮೊದಲಿಗೆ ಬಾಲಕ ಸಮಸ್ಯೆಯ ಬಗ್ಗೆ ತಿಳಿಸಿದ. ಬಳಿಕ ಎರಡು ಸುತ್ತಿನ ಸಮಾಲೋಚನೆ ನಡೆಸಿದಾಗ ವಿಚಾರ ಬೆಳಕಿಗೆ ಬಂದಿದೆ. ಆರು ಸಂಸ್ಥೆಗಳಲ್ಲಿ ಇಂತಹ 20 ನಿದರ್ಶನಗಳು ಬೆಳಕಿಗೆ ಬಂದವು. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ತಿಳಿಸಿದರು.

ಕುಂಪಲದ ಈ ಸಂಸ್ಥೆಯಲ್ಲೇ 4 ಪ್ರಕರಣಗಳು ದೊರೆತಿದೆ. ಮಕ್ಕಳನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

“ಗುಡ್ ಟಚ್ ಮತ್ತು ಬ್ಯಾಡ್ ಟಚ್‌ಗಳ ಮೂಲಕ ಮಕ್ಕಳಿಗೆ ಅರಿವು ಮೂಡಿಸುವ ಹಾಗೂ ಲೈಂಗಿಕ ದೌರ್ಜನ್ಯದ ಕುರಿತು ಎಚ್ಚರಿಕೆ ನೀಡುವ ಕಾರ್ಯಕ್ರಮ” ಎಂದು ನಾವು ಮಕ್ಕಳ ಆರೈಕೆದಾರರಿಗೆ ತಿಳಿಸದೆ ಸಂಪೂರ್ಣವಾಗಿ ಗೌಪ್ಯವಾಗಿಟ್ಟು ಜಾಗೃತಿ ಕಾರ್ಯಕ್ರಮ ನಡೆಸಿದ್ದರ ಪರಿಣಾಮ ಸತ್ಯಾಂಶ ಹೊರಬಿದ್ದಿದೆ. ಮಕ್ಕಳ ಆರೈಕೆ ಕೇಂದ್ರದಲ್ಲಿ ಮಕ್ಕಳು ಏನನ್ನೂ ಹಂಚಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ ಎಂಬ ಕಾರಣಕ್ಕೆ ಟಿಎಂಎ ಪೈ ಹಾಲ್‌ನಲ್ಲಿ ಕಾರ್ಯಕ್ರಮ ನಡೆಸಲಾಯಿತು ಎಂದು ಶಶಿಕುಮಾರ್‌ ತಿಳಿಸಿದ್ದಾರೆ.

ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

5 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

5 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

6 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

6 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

10 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

10 hours ago