ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ) ಮಂಗಳೂರು ವಿಭಾಗವು, ಮಂಗಳೂರು ಜಂಕ್ಷನ್ (ಪಡೀಲ್) ರೈಲು ನಿಲ್ದಾಣದಿಂದ ನಗರ ಬಸ್ ಸೇವೆಗಳನ್ನು ಪ್ರಾರಂಭಿಸಿದ್ದು, ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.
ನಗರದ ವಿವಿಧ ಭಾಗಗಳು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ರೈಲು ನಿಲ್ದಾಣದಿಂದ ಸುಗಮ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಮಂಗಳೂರು-3 ಘಟಕವು ಈ ಸೇವೆಯನ್ನು ಆರಂಭಿಸಿದೆ.
ಬಸ್ಸುಗಳ ವೇಳಾಪಟ್ಟಿ ಇಂತಿದೆ:
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕಟೀಲಿಗೆ:
ಬಸ್ ಬೆಳಗ್ಗೆ 6.55 ಮತ್ತು 10.45ಕ್ಕೆ ಹೊರಡುತ್ತವೆ. ಈ ಬಸ್ ಕೂಳೂರು, ಸುರತ್ಕಲ್, ಚೊಕ್ಕಬೆಟ್ಟು, ಕಾಟಿಪಳ್ಳ, ಶಿಬರೂರು ಮತ್ತು ಬಲವಿನಗುಡ್ಡೆ ಮಾರ್ಗವಾಗಿ ಸಂಚರಿಸುತ್ತವೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬೊಕ್ಕಪಟ್ಣಕ್ಕೆ:
ಬಸ್ಸುಗಳು ಬೆಳಗ್ಗೆ 8.45, 10.15, 11.45, ಮಧ್ಯಾಹ್ನ 1.30, 3.20, ಸಂಜೆ 5.00 ಮತ್ತು 6.30ಕ್ಕೆ ಲಭ್ಯವಿವೆ. ಇವು ಕಂಕನಾಡಿ, ಜ್ಯೋತಿ, ಪಿವಿಎಸ್, ಲಾಲ್‌ಬಾಗ್, ಸುಲ್ತಾನ್ ಬತ್ತೇರಿ, ಅಮೃತ ವಿದ್ಯಾಲಯ ಮತ್ತು ಬೋಳಾರ ಮಾರ್ಗವಾಗಿ ಸಂಚರಿಸುತ್ತವೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಸ್ಟೇಟ್ ಬ್ಯಾಂಕ್‌ಗೆ:
ಬಸ್ಸುಗಳು ಮಧ್ಯಾಹ್ನ 1.00, 1.25, 2.40, 3.00 ಮತ್ತು ಸಂಜೆ 5.00 ಗಂಟೆಗೆ ಕಾರ್ಯನಿರ್ವಹಿಸುತ್ತವೆ. ಈ ಬಸ್ಸುಗಳು ಪಡಿಲ್, ಮರೋಳಿ, ನಂತೂರು, ಕದ್ರಿ ಮತ್ತು ಜ್ಯೋತಿ ಮಾರ್ಗವಾಗಿ ಸಂಚರಿಸುತ್ತವೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಕೊಡಿಕಲ್‌ಗೆ:
ಬಸ್ಸುಗಳು ಬೆಳಗ್ಗೆ 8.00, 9.00, 9.50, 11.00, ಮಧ್ಯಾಹ್ನ 12.15, 2.30 ಮತ್ತು 3.30ಕ್ಕೆ ಲಭ್ಯವಿವೆ. ಇವು ಪಡೀಲ್, ಮರೋಳಿ, ಕಂಕನಾಡಿ ಮಾರ್ಕೆಟ್, ಮಲ್ಲಿಕಟ್ಟೆ, ಕೆಪಿಟಿ, ಲಾಲ್‌ಬಾಗ್, ಉರ್ವ ಸ್ಟೋರ್ ಮತ್ತು ಕೊಟ್ಟಾರ ಮಾರ್ಗವಾಗಿ ಸಂಚರಿಸುತ್ತವೆ.
ಈ ಹೊಸ ಸಾರಿಗೆ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…