Featured

ಮಂಗಳೂರು : ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು : ನೂತನ ಕಮಿಷನರ್ ಸುಧೀರ್ ರೆಡ್ಡಿ – vishwanews24

ಮಂಗಳೂರು : ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು : ನೂತನ ಕಮಿಷನರ್ ಸುಧೀರ್ ರೆಡ್ಡಿ

ಮಂಗಳೂರು : ದ.ಕ. ಜಿಲ್ಲೆಯ ನಗರ ಆಗಿರಲಿ, ಗ್ರಾಮಾಂತರ ಆಗಿರಲಿ ಎಲ್ಲೇ, ಯಾವುದೇ ರೀತಿಯ ಅಪರಾಧ ಕೃತ್ಯ ನಡೆದಾಗ ಅಥವಾ ಅಕ್ರಮ ಚಟುವಟಿಕೆಗಳು ನಡೆದಾಗ ಅದನ್ನು ಜಂಟಿ ಕಾರ್ಯಾಚರಣೆಯ ಮೂಲಕ ನಿಭಾಯಿಸಲಿದ್ದೇವೆ ಎಂದು ಮಂಗಳೂರಿನ ನೂತನ ಕಮಿಷನರ್ ಸುಧೀರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದು ಹೇಳಿದರು.

ಈ ಸಂದರ್ಭ ಜತೆಯಲ್ಲಿದ್ದ ಎಸ್ಪಿ ಡಾ.ಅರುಣ್ ಕುಮಾರ್ ಅವರೂ ದನಿಗೂಡಿಸಿ, ಅದಕ್ಕಾಗಿಯೇ ನಾವು ಜತೆಯಲ್ಲಿಯೇ ಇಲ್ಲಿದ್ದೇವೆ ಎಂದರು.

ಕೋಮುದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಾಕುತ್ತಿರುವವರ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಯಾರದ್ದೇ ಯಾವ ಮಾತು ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವಂತಿರಬಾರದು. ವಾಕ್ ಸ್ವಾತಂತ್ರ್ಯ ಮತ್ತು ಅಪರಾಧ ಕೃತ್ಯಗಳಿಗೆ ಜನರನ್ನು ಪ್ರಚೋದಿಸುವ ಮಾತುಗಳ ನಡುವೆ ಸ್ಪಷ್ಟವಾದ ಅಂತರವಿದೆ. ಪ್ರಚೋದನೆ ನೀಡುವ ರೀತಿಯಲ್ಲಿ ಕಾನೂನಿಗೆ ವಿರುದ್ಧವಾಗಿ ಮಾತನಾಡಿದರೆ, ಸಿಆರ್‌ಪಿಸಿ, ಐಪಿಸಿ ಕಾನೂನುಗಳಿವೆ. ಕಾನೂನಿನಲ್ಲಿ ಈ ಬಗ್ಗೆ ಕ್ರಮಕ್ಕೆ ಸಾಕಷ್ಟು ಅವಕಾಶಗಳಿದ್ದು, ಇಲಾಖೆ ಸೂಕ್ತ ಕ್ರಮ ವಹಿಸಲಿದೆ ಎಂದು ಕಮಿಷನರ್ ಸುಧೀರ್ ರೆಡ್ಡಿ ಹೇಳಿದರು.

ಕೋಮುದ್ವೇಷ, ಯಾವುದೇ ಘಟನೆ ಆದಾಗ ತನಿಖೆ ನಡೆಸುತ್ತೇವೆ. ಇಲ್ಲಿನ ಜನರು ಬುದ್ಧಿವಂತರು. ಅವರಿಗೆ ಕಾನೂನಿನ ಅರಿವಿದೆ. ನಮ್ಮ ಪೊಲೀಸ್ ಇಲಾಖೆಯೂ ಅದೇ ಕಾನೂನನ್ನು ಕಲಿತು, ಅದನ್ನು ಪಾಲಿಸುತ್ತದೆ. ಪ್ರತಿ ಅಪರಾಧಕ್ಕೂ ತಕ್ಕುದಾದ ಕಾನೂನು ಇದೆ. ಆ ಕಾನೂನಿಗೆ ಅನುಸಾರವಾಗಿ ಕ್ರಮ ಆಗುತ್ತದೆ ಎಂದು ಅವರು ಹೇಳಿದರು.

ಠಾಣೆಗಳಲ್ಲಿ ಹಲವು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ತಳ ಹಂತದ ಪೊಲೀಸ್ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆಯ ಅಗತ್ಯವಿರುವ ಬೇಡಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಧೀರ್ ರೆಡ್ಡಿ ಅವರು, ಎಲ್ಲಾ ಅಧಿಕಾರಿ ಸಿಬ್ಬಂದಿ ಉತ್ತಮವಾಗಿದ್ದಾರೆ. ಯಾರೇ ತಮ್ಮ ಕರ್ತವ್ಯದಲ್ಲಿ ವಿಫಲ ಆಗಿದ್ದಾರೆ ಎಂದರೆ ಅದರ ಜವಾಬ್ಧಾರಿಯನ್ನು ನಾನು ವಹಿಸುತ್ತೇನೆ. ನಮ್ಮ ಮಾರ್ಗದರ್ಶನವನ್ನು ಸರಿಯಾದ ದಿಸೆಯಲ್ಲಿ ಬಳಸಿಕೊಂಡು ಅವರು ಕಾರ್ಯ ನಿರ್ವಹಿಸಿದಾಗ ಯಾವುದೇ ತೊಂದರೆ ಆಗದು ಎಂದು ಹೇಳಿದರು.

ಪೊಲೀಸ್ ಕಮಿಷನರ್ ನಡೆಸುತ್ತಿದ್ದ ಫೋನ್ ಇನ್ ಕಾರ್ಯಕ್ರಮ ಮತ್ತೆ ಪುನರಾರಂಭ ಆಗಲಿದೆಯೇ ಎಂಬ ಪ್ರಶ್ನೆಗೆ, ಯಾವುದೇ ದೂರನ್ನು ಸಾರ್ವಜನಿಕರು ನೇರವಾಗಿ ನಮಗೆ ತರಬಹುದು. ಮಾಧ್ಯಮದ ಮೂಲಕ ಬಂದ ದೂರನ್ನು ಪರಿಗಣಿಸಲಾಗುವುದು. ಯಾವುದೇ ಅಪರಾಧ ಪ್ರಕರಣಗಳು ನಡೆದಾಗಲೂ ಹಿಂದೆಯೂ ತನಿಖೆ ಆಗಿದೆ. ಮುಂದೆಯೂ ಆಗಲಿದೆ. ನಮ್ಮ ಕೆಲಸವೇ ಪೊಲೀಸಿಂಗ್ ಮಾಡುವಂತದ್ದು. ಅದನ್ನು ನಾವು ನಿಭಾಯಿಸುತ್ತೇವೆ ಎಂದು ಅವರು ಹೇಳಿದರು.

ಡಿಸಿಪಿ ಸಿದ್ದಾರ್ಥ್ ಗೋಯಲ್ ಉಪಸ್ಥಿತರಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago