ಮಂಗಳೂರು, : ಜನರು ವಿಕೇಂಡ್ ಕರ್ಫ್ಯೂಗೆ ನೀಡಿದ ಸಹಕಾರ ಲಾಕ್‌ಡೌನ್ ಸಂದರ್ಭದಲ್ಲೂ ನೀಡಲಿ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಎನ್ ಶಶಿ ಕುಮಾರ್ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ನಾಳೆಯಿಂದ ಮೇ 12 ರ ಬೆಳಿಗ್ಗೆ 6 ರವರೆಗೆ 14 ದಿನಗಳ ಲಾಕ್‌ಡೌನ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಲಾಕ್‌ಡೌನ್ ಸಂದರ್ಭ ಸಹಕಾರ ನೀಡುವಂತೆ ಮನವಿ ಮಾಡಿದರು.
ಜನರು ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಹೇಗೆ ಸಹಕರಿಸಿದಿರೋ ಹಾಗೆಯೇ ಮೇ 12 ರವರೆಗೆ ಜನರು ಸಹಕರಿಸಬೇಕೆಂದು ವಿನಂತಿಸಿದರು.
ಪ್ರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 54 ಚೆಕ್‌ಪೋಸ್ಟ್‌ಗಳು, 3 ಮೊಬೈಲ್ ಸ್ಕ್ವಾಡ್‌ಗಳು ಇರಲಿದ್ದು, ಸುಮಾರು 1000 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಕೂಡಾ ಮಾಹಿತಿ ನೀಡಿದರು.
ಇನ್ನು ಬೆಳಿಗ್ಗೆ 6 ರಿಂದ ಬೆಳಿಗ್ಗೆ 10 ರವರೆಗೆ ಜನರಿಗೆ ಅಗತ್ಯ ವಸ್ತುಗಳ ಖರೀದಿಗೆ ಸಮಯವಿರುವಾಗ ಜನರಿಗೆ ಸಹಕರಿಸುವಂತೆ ಪೊಲೀಸರುಗೆ ಸಹ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…