ಮಂಗಳೂರು: ಮುಂಬರುವ 2023ರ ಜನವರಿ ಮಾಹೆಯಲ್ಲಿ ಕರಾವಳಿ ಉತ್ಸವ ಹಮ್ಮಿಕೊಳ್ಳುವ ಬಗ್ಗೆ ಡಿ.20ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.
ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ, ಸಂಜೆಯೊಳಗೆ ಕರಾವಳಿ ಉತ್ಸವದ ದಿನಾಂಕವನ್ನು ನಿಗದಿ ಪಡಿಸಲಾಗುವುದು, ಕರಾವಳಿ ಉತ್ಸವದ ಪೂರ್ವಭಾವಿ ಸಿದ್ಧತೆಗೆ ವಿವಿಧ ಸಮಿತಿಗಳು, ಉಪ ಸಮಿತಿಗಳನ್ನು ರಚಿಸಿ, ತಮ್ಮ ಹಂತದಲ್ಲಿ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳನ್ನು ಸಿದ್ದಪಡಿಸಿ ಜಿಲ್ಲಾಡಳಿತಕ್ಕೆ ಸಲ್ಲಿಸಲು ಸೂಚಿಸಿದ ಅವರು, ಬೇಕಾದ ಅನುದಾನದ ಬಿಡುಗಡೆಗೆ ಸರ್ಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.
ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ವೇದಿಕೆಯಲ್ಲಿದ್ದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಯವರು ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…