Featured

ಮಂಗಳೂರು: ಜನವರಿಯಲ್ಲಿ ಸರಕಾರ ಪತನ ;  ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್‌ – vishwanews24

ಜನವರಿಯಲ್ಲಿ ಸರಕಾರ ಪತನ ;  ಮಧ್ಯಾಂತರ ಚುನಾವಣೆಗೆ ಬಿಜೆಪಿಯಲ್ಲಿ ಸಿದ್ಧತೆ : ಶಾಸಕ ವಿ. ಸುನಿಲ್ ಕುಮಾರ್‌

ಮಂಗಳೂರು: ರಾಜ್ಯದಲ್ಲಿ ಅಭಿವೃದ್ಧಿ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಗೊಂದಲದಲ್ಲಿ ಕಾಲಹರಣ ಮಾಡಲಾಗುತ್ತಿದೆ. ಗ್ರಾಮ ಮಟ್ಟದಿಂದ ವಿಧಾನಸೌಧದ ತನಕ ಆಡಳಿತ ವ್ಯವಸ್ಥೆ ಕುಸಿದಿದೆ. ಇದನ್ನೆಲ್ಲ ನೋಡಿದರೆ ಜನವರಿ ವೇಳೆಗೆ ಈ ಸರಕಾರ ಪತನವಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮಧ್ಯಾಂತರ ಚುನಾವಣೆಗೆ ಸಿದ್ಧತೆ ನಡೆಸಿದೆ ಎಂದು ಶಾಸಕ ವಿ. ಸುನಿಲ್ ಕುಮಾರ್‌ಹೇಳಿದರು.

ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ನವೆಂಬರ್‌ನಲ್ಲಿ ಯಾರು ಮುಖ್ಯಮಂತ್ರಿ ಆಗುತ್ತಾರೆ ಎನ್ನುವುದು ಬಿಜೆಪಿಗೆ ಸಂಬಂಧಿಸಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ನವೆಂಬರ್ ಕ್ರಾಂತಿ ಅನ್ನುವುದು ಕಾಂಗ್ರೆಸ್ ನವರೇ ಹುಟ್ಟು ಹಾಕಿರುವಂಥದ್ದು. ರಾಜ್ಯದ ಜನತೆ ಬಹುಮತವನ್ನು ಕೊಟ್ಟಾಗ ಒಳ್ಳೆಯ ಆಡಳಿತವನ್ನು ನಿರೀಕ್ಷಿಸಿದ್ದೆವು. ಆದರೆ ಅದರ ಬದಲು ಆಂತರಿಕ ಕಚ್ಚಾಟದಲ್ಲಿ ಈ ಸರಕಾರ ಮುಳುಗಿದೆ ಎಂದರು.

 

ರಾಜ್ಯದ ಅಭಿವೃದ್ಧಿ ದೃಷ್ಟಿಯಲ್ಲಿ ದಿಲ್ಲಿಗೆ ಹೋಗುವುದನ್ನು ಸಿಎಂ ಮತ್ತು ಡಿಸಿಎಂ ಮರೆತಿದ್ದಾರೆ. ಈ ಹಿಂದೆ ಪ್ರಧಾನ ಮಂತ್ರಿ ವಿರುದ್ಧ ಪ್ರತಿಭಟನೆಗೆ ವಿಶೇಷ ವಿಮಾನದಲ್ಲಿ ಹೋಗಿದ್ದರು. ಈ ಸರಕಾರ ಯಾವಾಗ ಕುಸಿದು ಬೀಳುತ್ತದೆ ಎನ್ನುವುದನ್ನು ಜನರು ನಿರೀಕ್ಷೆಯಿಂದ ನೋಡುತ್ತಿದ್ದಾರೆ. ರಾಜ್ಯದಲ್ಲಿ ಶೇ. 80 ಕಮಿಷನ್ ಆಗಿದೆ. ದುಡ್ಡು ಕೊಟ್ಟರೂ ಕೆಲಸ ಆಗದ ವಾತಾವರಣ ಗ್ರಾ.ಪಂ. ತನಕ ಬಂದಿದೆ. ಕರಾವಳಿ ಭಾಗದ ಜಿಲ್ಲೆಗಳ ಸಂಪೂರ್ಣ ನಿರ್ಲಕ್ಷಿಸಲಾಗಿದೆ
ಎಂದು ಟೀಕಿಸಿದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

5 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

6 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

6 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

6 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

6 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

8 hours ago