Featured

ಮಂಗಳೂರು: ಜಮಾಅತ್‍ಗೆ ತೆರಳಿ ಇಸ್ಲಾಂ ಭಾಂಧವರನ್ನು ಜಾತ್ರೆಗೆ ಆಹ್ವಾನಿಸಿದ ಅರಸು ದೈವಗಳು – Vishwanews24

ತುಳುನಾಡಿನ ಕೋಮುಸಾಮರಸ್ಯದ ಉದ್ಯಾವರ ಮಾಡ ಜಾತ್ರೆ

ಮಸೀದಿಗೆ  ಭೇಟಿ ನೀಡಿ ಮುಸ್ಲಿಂ  ಬಾಂಧವರನ್ನ ಸಾಂಪ್ರದಾಯಿಕವಾಗಿ ಜಾತ್ರೋತ್ಸವಕ್ಕೆ ಆಹ್ವಾನಿಸಿದ ತುಳುವರ ಆರಾಧ್ಯ ದೈವಗಳು

ಮಂಗಳೂರು: ಕರಾವಳಿಯ ಹಿಂದೂ-ಮುಸ್ಲಿಂ  ಧರ್ಮ ದಂಗಲ್ ಮಧ್ಯೆಯೂ ತುಳುನಾಡಿನಲ್ಲಿ  ಭಾವೈಕ್ಯತೆಯ ಸಂಪ್ರದಾಯವೊಂದು ಮುಂದುವರೆದಿದೆ. ಧಾರ್ಮಿಕ ಸಂಘರ್ಷದ ನಡುವೆಯೂ ತುಳುವರ ಆರಾಧ್ಯ ದೈವಗಳು  ಮಸೀದಿಗೆ ಭೇಟಿ ನೀಡಿ ಮುಸ್ಲಿಂ  ಬಾಂಧವರನ್ನ ಸಾಂಪ್ರದಾಯಿಕವಾಗಿ ಜಾತ್ರೋತ್ಸವಕ್ಕೆ ಆಹ್ವಾನಿಸಿದೆ.

ತುಳುನಾಡಿನ ಗಡಿನಾಡಿನಲ್ಲಿ ಸಾಂಪ್ರದಾಯಿಕ ಆಚರಣೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಮಂಗಳೂರಿನ ಕರ್ನಾಟಕ-ಕೇರಳ ಗಡಿ ಭಾಗದ ಉದ್ಯಾವರ ಅರಸು ಮಂಜಿಷ್ಣಾರ್‌ ಕ್ಷೇತ್ರದ ಜಾತ್ರೆಯ ಪೂರ್ವಭಾವಿಯಾಗಿ ಉದ್ಯಾವರ ಸಾವಿರ ಜಮಾಅತ್‌ ಮಸೀದಿಗೆದೈವಗಳ ಭೇಟಿ ವಾಡಿಕೆ. ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತದೊಂದಿಗೆ ಕಳೆದ 800 ವರ್ಷಗಳಿಂದ ವಾಡಿಕೆಯಲ್ಲಿರುವ ಸಂಪ್ರದಾಯದಂತೆ ಅರಸು ದೈವ ಪಾತ್ರಿಗಳು ಮತ್ತು ದೇವಸ್ಥಾನದ ಪ್ರತಿನಿಧಿಗಳು ಹಾಗೂ ಸಹಸ್ರಾರು ಹಿಂದೂ ಬಾಂಧವರು ಮಸೀದಿಗೆ ಭೇಟಿ ನೀಡಿದ್ದಾರೆ.

ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಪ್ರಾಚೀನ ಕಾಲದಿಂದಲೇ ಆಚರಿಸಿಕೊಂಡು ಬಂದಿರುವ ಸಂಪ್ರದಾಯ ಇದಾಗಿದ್ದು, ಉದ್ಯಾವರ ಕ್ಷೇತ್ರದ ಭಂಡಾರ ಮನೆಯಿಂದ ಹೊರಟ ದೈವಗಳು ಮಸೀದಿ ಭೇಟಿ ಮಾಡಿವೆ. ಮಸೀದಿಯ ಆಡಳಿತ ಸಮಿತಿ ಪ್ರತಿನಿಧಿಗಳು ಹಾಗೂ ಸಹಸ್ರಾರು ಮುಸ್ಲಿಂ ಬಾಂಧವರು ಪರಂಪರಾಗತ ರೀತಿಯಲ್ಲಿ ಉದ್ಯಾವರ ಅರಸು ದೈವ ಪಾತ್ರಿಗಳಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ.

ಜಮಾಅತ್‌ನೊಳಗೆ ಪ್ರವೇಶಿಸಿದ ದೈವ ಪಾತ್ರಿಗಳು ಮುಸ್ಲಿಂ ಬಾಂಧವರಿಗೆ ಜಾತ್ರೋತ್ಸವಕ್ಕೆ ಆಹ್ವಾನ ನೀಡಿದ್ದಾರೆ‌. ಮೇ 9ರಿಂದ 15ರ ತನಕ ಮಾಡ ಕ್ಷೇತ್ರದ ಉತ್ಸವಕ್ಕೆ ಸಾವಿರ ಜಮಾಅತ್‌ ಗೆ ಆಹ್ವಾನ ನೀಡಲಾಗಿದೆ. ನೇಮೋತ್ಸವದ ದಿನ ಜಮಾಅತ್‌ನ ಮುಖ್ಯಸ್ಥರಿಗೆ ಕೂರಲು ದೇವಸ್ಥಾನದ ಕಟ್ಟೆಯಲ್ಲಿ ವಿಶೇಷವಾದ ಸ್ಥಳವನ್ನು ಕೂಡ ನೀಡಲಾಗುತ್ತದೆ. ದೈವಗಳು ಆಶೀರ್ವದಿಸಿದ ಮಲ್ಲಿಗೆ ಹೂವುಗಳನ್ನು ಜಮಾಅತ್‌ನವರಿಗೆ ನೀಡುವುದು ಕೂಡ ಇಲ್ಲಿನ ಸಂಪ್ರದಾಯ.‌ ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದರೂ ತುಳು ಭಾಷಿಗರೇ ಹೆಚ್ಚಾಗಿರುವ ಗಡಿ ಭಾಗದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮುಂದುವರೆದಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

9 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago