ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ (ರಿ)ದ 29ನೇ ವಾರ್ಷಿಕ ಮಹಾಸಭೆಯು ಮಂಗಳವಾರ ನಗರದ ಬಂಟ್ಸ್ ಹಾಸ್ಟೆಲ್ ಬಳಿಯಿರುವ ಬಂಟರ ಯಾನೆ ನಾಡವರ ಮಾತೃ ಸಂಘದ ಶ್ರೀ ರಾಮಕೃಷ್ಣ ಕಾಲೇಜು ಮೈದಾನದಲ್ಲಿ ಸಂಘದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯ ಅಧ್ಯಕ್ಷತೆಯಲ್ಲಿ ನಡೆಯಿತು. ಚುನಾವಣಾಧಿಕಾರಿ ಪೃಥ್ವಿರಾಜ್ ರೈ ಪ್ರಕ್ರಿಯೆ ನಡೆಸಿಕೊಟ್ಟರು.
ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಕರ್ನಿರೆ ವಿಶ್ವನಾಥ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಜಯಕರ್ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿಯಾಗಿ ಉಳ್ಳೂರು ಮೋಹನದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಚಂದ್ರಹಾಸ್ ಡಿ.ಶೆಟ್ಟಿ ರಂಗೋಲಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಉಮಾ ಕೃಷ್ಣ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷರಾಗಿ ಗಿರೀಶ್ ಶೆಟ್ಟಿ ತೆಳ್ಳಾರ್, ಸಂಚಾಲಕರಾಗಿ ಕೊಲ್ಲಾಡಿ ಬಾಲಕೃಷ್ಣ ರೈ ಆಯ್ಕೆಗೊಂಡರು.
ಐಕಳ ಹರೀಶ್ ಶೆಟ್ಟಿ ಅವರನ್ನು ಗುರುದೇವಾನಂದ ಸ್ವಾಮೀಜಿ, ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಸನ್ಮಾನಿಸಿದರು.
ಈ ಸಂದರ್ಭ ಸ್ಪೀಕರ್ ಯು.ಟಿ.ಖಾದರ್, ದುಬೈ ಯುಎಇ ಅಧ್ಯಕ್ಷ ವಕ್ವಾಡಿ ಪ್ರವೀಣ್ ಶೆಟ್ಟಿ, ಬಂಟರ ಸಂಘ ಮುಂಬೈ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಶೆಟ್ಟಿ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಪೃಥ್ವಿರಾಜ್ ರೈ, ಎ.ಸಿ. ಭಂಡಾರಿ, ಸುಧಾಕರ್ ಎಸ್. ಪೂಂಜ, ಮಂಜು ಕೊಡ್ಲಾಡಿ, ಆನಂದ್ ಶೆಟ್ಟಿ, ನಾಗೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರಾಜೀವ್ ಭಂಡಾರಿ, ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮತ್ತಿತರರು ಉಪಸ್ಥಿತರಿದ್ದರು.
ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ನಿತೇಶ್ ಶೆಟ್ಟಿ ಎಕ್ಕಾರ್, ಪ್ರಿಯಾ ಹರೀಶ್ ಶೆಟ್ಟಿ, ರಾಜೇಶ್ವರಿ ಡಿ.ಶೆಟ್ಟಿ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…