Featured

ಮಂಗಳೂರು: ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಕ್ಕೆ ವಿರೋಧ : ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಪ್ರತಿಭಟನೆ : ಮಿಥುನ್ ರೈ – Vishwanews24

ದೇವಸ್ಥಾನದ ಜಾತ್ರೆ – ಉತ್ಸವಗಳ ಸಂದರ್ಭ ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಅನುಮತಿ ಇಲ್ಲ  : ಮಿಥುನ್ ರೈ ತೀವ್ರವ ಖಂಡನೆ

ಬಪ್ಪನಾಡು ರಥದ ಮೇಲಿರುವ ಮುಖ್ಯ ಛಾಯಾಚಿತ್ರ ಬಪ್ಪ ಬ್ಯಾರಿಯದ್ದು..

ಇಂತಹ ಸಮಾಜಘಾತುಕ ಕೃತ್ಯಗಳನ್ನು ಕ್ಷೇತ್ರದ ತಾಯಿ ಕೂಡಾ ಮೆಚ್ಚಲಾರರು..

ಜಾತ್ರೆ, ಉತ್ಸವ ಬಂದು ವ್ಯಾಪಾರ ಮಾಡುವವರು ಬಡಪಾಯಿಗಳು, ಹೊಟ್ಟೆ ಪಾಡಿಗಾಗಿ ವ್ಯಾಪಾರ ಮಾಡುವವರು..

ಮಂಗಳೂರು : ದೇವಸ್ಥಾನದ ಜಾತ್ರೆ – ಉತ್ಸವಗಳ ಸಂದರ್ಭ ಮುಸ್ಲಿಂ ವ್ಯಾಪಾರಸ್ಥರಿಗೆ ವ್ಯಾಪಾರಕ್ಕೆ ಅನುಮತಿ ಇಲ್ಲ ಎಂಬ ಬ್ಯಾನರ್‌ಗಳನ್ನು ಹಾಕಿರುವುದನ್ನು ಯುವ ಕಾಂಗ್ರೆಸ್ ಮುಖಂಡ ಮಿಥುನ್ ರೈ ತೀವ್ರವಾಗಿ ಖಂಡಿಸಿದ್ದು, ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಘೇರಾವ್ ಹಾಕುವುದಾಗಿ ಎಚ್ಚರಿಸಿದ್ದಾರೆ.

ನಗರದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಮೂಲ್ಕಿ ಬಪ್ಪನಾಡು ದೇವಸ್ಥಾನವು ಕೋಮು ಸೌಹಾರ್ದತೆಗೆ ಹೆಸರುವಾಸಿಯಾಗಿದೆ. ವಾರ್ಷಿಕ ದೇವಾಲಯದ ಜಾತ್ರೆಯ ಸಮಯದಲ್ಲಿ, ಸುಮಾರು 1.5 ಲಕ್ಷ ಮಲ್ಲಿಗೆಯನ್ನು ದೇವಿಗೆ ಅರ್ಪಿಸಲಾಗುತ್ತದೆ. ಈ ಮಲ್ಲಿಗೆಯನ್ನು ಶಂಕರಪುರದ ಕ್ರಿಶ್ಚಿಯನ್ನರು ಬೆಳೆಸುತ್ತಾರೆ, ಮುಸ್ಲಿಮರು ಮಾರಾಟ ಮಾಡುತ್ತಾರೆ ಮತ್ತು ಹಿಂದೂಗಳು ದೇವಿಗೆ ಅರ್ಪಿಸುತ್ತಾರೆ.ಬಪ್ಪನಾಡು ರಥದ ಮೇಲಿರುವ ಮುಖ್ಯ ಛಾಯಾಚಿತ್ರ ಬಪ್ಪ ಬ್ಯಾರಿಯದ್ದು. ಈ ಪುಣ್ಯಕ್ಷೇತ್ರ ಇಡೀ ದೇಶಕ್ಕೆ ಮಾದರಿಯಾಗಿದೆ.

ಆದರೆ ವಿವಾದಾತ್ಮಕ ಬ್ಯಾನರ್ ಪ್ರದರ್ಶಿಸಿ ಅವ್ಯವಸ್ಥೆ ಸೃಷ್ಟಿಸಲಾಗಿದೆ. ಶ್ರೀ ಕ್ಷೇತ್ರದ ಆಡಳಿತ ಮಂಡಳಿ ತಮಗೂ ಬ್ಯಾನರ್ ಗೂ ಸಂಬಂಧ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಜಿಲ್ಲಾಡಳಿತ ಬ್ಯಾನರ್ ತೆರವಿಗೆ ವಿಳಂಬ ಮಾಡುತ್ತಿರುವುದು ಅವ್ಯವಸ್ಥೆಯನ್ನು ಹೆಚ್ಚಿಸಿದೆ.ಜಿಲ್ಲಾಡಳಿತ ಇಂತಹ ಕೃತ್ಯಗಳಿಗೆ ಪ್ರಚೋದನೆ ನೀಡುತ್ತಿರುವುದು ಸ್ಪಷ್ಟವಾಗಿ ತಿಳಿಯುತ್ತದೆ. ಇಂತಹ ಸಮಾಜಘಾತುಕ ಕೃತ್ಯಗಳನ್ನು ಕ್ಷೇತ್ರದ ತಾಯಿ ಕೂಡಾ ಮೆಚ್ಚಲಾರರು ’ ಎಂದು ಮಿಥುನ್ ರೈ ಹೇಳಿದ್ದಾರೆ.

ಜಾತ್ರೆ, ಉತ್ಸವ ಬಂದು ವ್ಯಾಪಾರ ಮಾಡುವವರು ಬಡಪಾಯಿಗಳು, ಹೊಟ್ಟೆ ಪಾಡಿಗಾಗಿ ವ್ಯಾಪಾರ ಮಾಡುವವರು ಈ ರಾಜಕೀಯ ಬೇಕಿಲ್ಲ . ಹೀಗಾಗಿ ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಿಥುನ್ ರೈ ಎಚ್ಚರಿಸಿದ್ದಾರೆ.

Vishwa News 24

Recent Posts

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

13 minutes ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

26 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

31 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

1 hour ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

1 hour ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago