Featured

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ – Vishwanews24

ಮಂಗಳೂರು : ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಚುನಾವಣಾ ಸಿಬ್ಬಂದಿ

ಮಂಗಳೂರು : ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು ನಗರದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು(ಎ.2). ಬೆಳಗ್ಗೆ ನಡೆದಿದೆ.

ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನಿಸಿದವರು. ನಗರದ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿರುವ ಏಕಗವಾಕ್ಷಿ ಪದ್ದತಿ ತಂಡದ ಸದಸ್ಯರಾಗಿದ್ದರು.

ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಅವರು ಇಂದು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ತಕ್ಷಣ ಅವರನ್ನು ನಗರದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ತಿಳಿದುಬಂದಿದೆ.

 

2019ರಿಂದ ಬೆಳ್ತಂಗಡಿಯ ಕಡಿರು ಉದ್ಯಾವರ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಇವರ ಜಾಗಕ್ಕೆ ಮತ್ತೊಬ್ಬರು ವರ್ಗಾವಣೆಯಾದ ಹಿನ್ನೆಲೆಯಲ್ಲಿ ಕಳೆದ ಫೆಬ್ರವರಿ ಹಾಗೂ ಮಾರ್ಚ್ ನಿಂದ ಸ್ಥಳ ನಿರೀಕ್ಷಣೆಯಲ್ಲಿದ್ದರು.

ಜಿಪಂ ಸಿಇಒ ಡಾ.ಆನಂದ್, ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ತಿಮ್ಮಯ್ಯ, ಜಿಲ್ಲಾ ಪಂಚಾಯತ ನ ಲೆಕ್ಕಾಧೀಕ್ಷ ಬಾಲು ಡಿ.ಎಂ. ಸೇರಿದಂತೆ ಹಲವು ಅಧಿಕಾರಿಗಳು, ಸಿಬ್ಬಂದಿ ಆಸ್ಪತ್ರೆಯಲ್ಲಿದ್ದು, ಶ್ರೀಧರ್ ರ ಚಿಕಿತ್ಸೆಗೆ ನೆರವಾಗಿದ್ದಾರೆ.

ಜಿಪಂ ಸಿಇಒ ಡಾ.ಆನಂದ್ ಹಾಗೂ ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್ ಅವರು ಆತ್ಮಹತ್ಯೆಗೆ ಯತ್ನಿಸಿದ ಶ್ರೀಧರ ಹೆಗಡೆಯವರ ಪತ್ನಿ, ಮಕ್ಕಳು ಹಾಗೂ ಕುಟುಂಬದ ಸದಸ್ಯರೊಂದಿಗೆ ಮಾತನಾಡಿ, ಅವರಲ್ಲಿ ಆತ್ಮಸ್ಥೈರ್ಯ ತುಂಬಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago