Featured

ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಿಢೀರ್ ದಾಳಿ: 9 ಕೈದಿಗಳಿಂದ 10 ಮೊಬೈಲ್ ವಶ  – vishwanews24

ಮಂಗಳೂರು : ಜಿಲ್ಲಾ ಕಾರಾಗೃಹಕ್ಕೆ ಪೊಲೀಸರ ದಿಢೀರ್ ದಾಳಿ: 9 ಕೈದಿಗಳಿಂದ 10 ಮೊಬೈಲ್ ವಶ

ಮಂಗಳೂರು: ಮಂಗಳೂರಿನ ಜಿಲ್ಲಾ ಕಾರಾಗೃಹಕ್ಕೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದು, ಈ ವೇಳೆ ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ಅಕ್ರಮವಾಗಿ ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಸುತ್ತಿರುವ ಕುರಿತು ಬಂದ ಖಚಿತ ಮಾಹಿತಿ ಮೇರೆಗೆ ಮಂಗಳೂರು ನಗರ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ 9 ಮಂದಿ ಕೈದಿಗಳಿಂದ ಒಟ್ಟು 10 ಸ್ಮಾರ್ಟ್‌ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ದಿನಾಂಕ 08-09-2026ರ ರಾತ್ರಿ ಬರ್ಕೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 82/2026, ಕಲಂ 323 ಬಿಎನ್ಎಸ್ ಹಾಗೂ ಕಲಂ 42 ಕರ್ನಾಟಕ ಕಾರಾಗೃಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪ್ರಕರಣವೊಂದರ ತನಿಖೆಯ ಭಾಗವಾಗಿ ಜೈಲಿನ ‘ಎ-ಬ್ಲಾಕ್’ ಮೇಲೆ ದಿಢೀರ್ ದಾಳಿ ನಡೆಸಿ ಕೂಲಂಕಷ ತಪಾಸಣೆ ನಡೆಸಿದಾಗ ಮೊಬೈಲ್ ಬಳಕೆ ಮಾಡುತ್ತಿರುವುದು ಗೊತ್ತಾಗಿದೆ.

ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಪ್ಪಕ್ ಅಲಿಯಾಸ್ ಜುಟ್ಟು ಅಸ್ಪಕ್, ಅರ್ಷದ್, ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್, ಅರ್ಫಜ್ ಮೊಬೈಲ್ ಬಳಕೆ ಮಾಡುತ್ತಿರುವುದು ಗೊತ್ತಾಗಿದ್ದು, ಪೊಲೀಸರು ಇವರಿಂದ ಮೊಬೈಲ್ ಜಪ್ತಿ ಮಾಡಿಕೊಂಡಿದ್ದಾರೆ.

ಮೊಬೈಲ್ ಹೊಂದಿದ್ದ ಆರೋಪಿಗಳ ಪೈಕಿ ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಪ್ಪಕ್ ಅಲಿಯಾಸ್ ಜುಟ್ಟು ಅಸ್ಪಕ್ ಮತ್ತು ಅರ್ಷದ್ ಇತ್ತೀಚೆಗೆ ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಪ್ರಕರಣದ ಮುಖ್ಯ ಆರೋಪಿಗಳಾಗಿದ್ದಾರೆ.

ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್ ಎನ್ನುವ ಕೈದಿಗಳು ಎನ್‌ಡಿಪಿಎಸ್ (ಮಾದಕ ದ್ರವ್ಯ ಜಾಲ) ಪ್ರಕರಣದ ಡ್ರಗ್ ಪೆಡ್ಲರ್‌ಗಳಾಗಿದ್ದು, 9ನೇ ಕೈದಿ ಅರ್ಫಜ್ ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾದ ‘ಕೋಕಾ’ (KOCA) ಪ್ರಕರಣದ ಆರೋಪಿಯಾಗಿದ್ದಾನೆ.
ಕಾರಾಗೃಹದೊಳಗೆ ಈ ಮೊಬೈಲ್ ಫೋನ್‌ಗಳು ಹೇಗೆ ಸರಬರಾಜಾದವು ಮತ್ತು ಇವುಗಳನ್ನು ಯಾವುದಕ್ಕಾಗಿ ಬಳಕೆ ಮಾಡಲಾಗುತ್ತಿತ್ತು ಎಂಬುದರ ಕುರಿತು ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಸುದೀರ್ಘ ತನಿಖೆ ಮುಂದುವರಿಸಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Vishwa News 24

Recent Posts

ವಿಟ್ಲ : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮೂವರ ಬಂಧನ- vishwanews24

ವಿಟ್ಲ : ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಮೂವರ ಬಂಧನ ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

4 minutes ago

ಉಡುಪಿ: ಬಾರ್ಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ – vishwanews24

ಉಡುಪಿ: ಬಾರ್ಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ ವೀರಗಲ್ಲು ಪತ್ತೆ ಉಡುಪಿ: ತುಳುನಾಡಿನ ಚಾರಿತ್ರಿಕ ರಾಜಧಾನಿ ಬಾರ್ಕೂರಿನಲ್ಲಿ ಅತ್ಯಂತ ಅಪರೂಪದ ಸಿಡಿತಲೆ…

1 hour ago

ಮಲ್ಪೆ: ರಸ್ತೆ ಬದಿ ಪತ್ತೆಯಾಗಿದ್ದ ನವಜಾತ ಶಿಶು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು – vishwanews24

ಮಲ್ಪೆ: ರಸ್ತೆ ಬದಿ ಪತ್ತೆಯಾಗಿದ್ದ ನವಜಾತ ಶಿಶು ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ…

1 hour ago

ಉಡುಪಿ:  ಆಸ್ಟ್ರೋ ಮೋಹನ್‌ಗೆ ಅಮೆರಿಕದ ಪ್ರತಿಷ್ಠಿತ ‘ಇಪಿಎಸ್‌ಎ’ ಗೌರವ – vishwanews24

ಉಡುಪಿ:  ಆಸ್ಟ್ರೋ ಮೋಹನ್‌ಗೆ ಅಮೆರಿಕದ ಪ್ರತಿಷ್ಠಿತ ‘ಇಪಿಎಸ್‌ಎ’ ಗೌರವ ಮೂರು ದಶಕಗಳ ಛಾಯಾಪತ್ರಿಕೋದ್ಯಮ, ಅಂತಾರಾಷ್ಟ್ರೀಯ ಛಾಯಾಚಿತ್ರ ಪ್ರದರ್ಶನಗಳಲ್ಲಿನ ನಿರಂತರ ಸಾಧನೆಗೆ…

2 hours ago

ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿಗೆ ಚರ್ಚೆ : ಮುಖ್ಯಮಂತ್ರಿ ಡಿ.ಕೆ.ಶಿ ದೇವನಹಳ್ಳಿ: ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ…

2 hours ago

ಗ್ರಾಮೀಣ ಪ್ರದೇಶಗಳಲ್ಲಿ ಇನ್ಮುಂದೆ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ – vishwanews24

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ 25 ದಿನಕ್ಕೊಮ್ಮೆ ಎಲ್‌ಪಿಜಿ ಸಿಲಿಂಡರ್ ನವದೆಹಲಿ:  ಗ್ರಾಮೀಣ ಪ್ರದೇಶಗಳಲ್ಲಿ ಎಲ್‌ಪಿಜಿ ಸಿಲಿಂಡರ್ ರಿಫಿಲ್ ಬುಕ್ಕಿಂಗ್ ನಡುವಿನ…

2 hours ago