ಮಂಗಳೂರು,: ಕೊಡಿಯಾಲ್‌ಬೈಲ್‌ನ ಜಿಲ್ಲಾ ಕಾರಾಗೃಹದಲ್ಲಿ ರವಿವಾರ ಸುಮಾರು 300 ಪೊಲೀಸರ ತಂಡ ದಿಢೀರ್ ತಪಾಸಣೆ ನಡೆಸಿತು.
ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ನೇತೃತ್ವದಲ್ಲಿ ಮಧ್ಯಾಹ್ನ ಕೆಎಸ್‌ಆರ್‌ಪಿ ಹಾಗೂ ವಿವಿಧ ಠಾಣೆಗಳ ಅಧಿಕಾರಿ, ಸಿಬಂದಿ ಸುಮಾರು ಒಂದೂವರೆ ತಾಸು ತಪಾಸಣೆ ನಡೆಸಿದರು.
ತಂಬಾಕು ಉತ್ಪನ್ನಗಳು ಪತ್ತೆ: ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, “ಇಂಥ ದಿಢೀರ್ ಭೇಟಿಯನ್ನು ಆಗಿಂದಾಗ್ಗೆ ಮಾಡಲಾಗುವುದು. ತಪಾಸಣೆ ವೇಳೆ ಬೀಡಿ, ಸಿಗರೇಟು, ತಂಬಾಕು ಪತ್ತೆಯಾಗಿದೆ.
ಮಾದಕ ವಸ್ತು ಅಥವಾ ಬೇರೆ ವಸ್ತುಗಳು ಸಿಕ್ಕಿಲ್ಲ. ಕೈದಿಗಳು ಮೊಬೈಲ್ ಕರೆ ಮಾಡುತ್ತಿರುವ ಬಗ್ಗೆಯೂ ಮಾಹಿತಿ ಸಿಕ್ಕಿಲ್ಲ. ಕಾರಾಗೃಹದಲ್ಲಿ ಕೆಎಸ್‌ಐಎಸ್ ಎಫ್(ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ) ಹಾಗೂ ಕಾರಾಗೃಹ ಅಧಿಕಾರಿಗಳು ನಿರಂತರ ವಾಗಿ ಸಮರ್ಪಕವಾಗಿ ತಪಾಸಣೆ ನಡೆಸುತ್ತಿದ್ದಾರೆ. ಕಾರಾಗೃಹ ಅಧೀಕ್ಷಕ ರೊಂದಿಗೆ ಮಾತುಕತೆ ನಡೆಸಿದ್ದೇನೆ’ ಎಂದು ತಿಳಿಸಿದರು.
ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಅಂಶುಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಿಲ್ಲಾ ಕಾರಾಗೃಹದಲ್ಲಿ ರವಿವಾರ 400 ಪುರುಷರು, 8 ಮಹಿಳೆಯರು ಸಹಿತ ಒಟ್ಟು 408 ಮಂದಿ ವಿಚಾರಣಾಧೀನ ಕೈದಿಗಳಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…