ಮಂಗಳೂರು : ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ವಿಸ್ತಾರವಾಗಿ, ಬೇರುಮಟ್ಟದಿಂದ ಬಲಪಡಿಸಿ : ನಳಿನ್‌ ಕುಮಾರ್ ಕಟೀಲ್‌ ಸೂಚನೆ -Vishwanews24

ಮಂಗಳೂರು : ಬಿಜೆಪಿ ಭದ್ರಕೋಟೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ವಿಸ್ತಾರವಾಗಿ, ಬೇರುಮಟ್ಟದಿಂದ ಬಲಪಡಿಸಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಸೂಚನೆ ನೀಡಿದರು.

ನಗರದ ಕಾವೂರಿನಲ್ಲಿ ಭಾನುವಾರ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಪ್ರಮುಖರ ಸಭೆಯಲ್ಲಿ ಅವರು ಮಾತನಾಡಿದರು.

 

‘ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ನೀವೆಲ್ಲ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಾ, ಆದಷ್ಟು ಸರ್ಕಾರದ ಯೋಜನೆಗಳನ್ನು ತಳಮಟ್ಟದಲ್ಲಿರುವ ಸಾಮಾನ್ಯ ಜನರಿಗೆ ತಲುಪಿಸಬೇಕು. ಜನರೊಂದಿಗೆ ಇದ್ದು, ಪಕ್ಷವನ್ನು ಬೆಳೆಸಬೇಕು’ ಎಂದರು.

‘ಗ್ರಾಮ ಪಂಚಾಯಿತಿ ಚುನಾವಣೆ ಸಮೀಪಿಸುತ್ತಿದೆ. ಇದು ಗ್ರಾಮ ಮತ್ತು ಪಕ್ಷ ಬಲವರ್ಧನೆಯ ಉತ್ತಮ ಅವಕಾಶ. ಉತ್ತಮವಾಗಿ ಕೆಲಸ ಮಾಡಿ’ ಎಂದು ಹಾರೈಸಿದರು.

 

ಜಿಲ್ಲಾ ಅಧ್ಯಕ್ಷ ಸುದರ್ಶನ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ, ‘ಕೋವಿಡ್–19 ಲಾಕ್‌ಡೌನ್‌ ಸಂಕಷ್ಟದ ಸಂದರ್ಭದಲ್ಲಿ ಪಕ್ಷ ಮತ್ತು ಪರಿವಾರದ ಸಂಘಟನೆಗಳೆಲ್ಲ ಜೊತೆಯಾಗಿ ಜನರ ಕಷ್ಟಗಳಿಗೆ ಸ್ಪಂದಿಸಿ ಸೇವಾಕಾರ್ಯ ನಡೆಸಿದ್ದೇವೆ. ಜನಪ್ರತಿನಿಧಿಗಳ ನೇತೃತ್ವದಲ್ಲಿ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇವೆ’ ಎಂದು ವಿವರಿಸಿದರು.ಅಲ್ಲದೇ, ಪಕ್ಷ ಸಂಘಟನೆ ಹಾಗೂ ವಿವಿಧ ಘಟಕಗಳ ರಚನೆ, ಯೋಜನೆಗಳ ಕುರಿತು ಅವರು ಮಾಹಿತಿ ನೀಡಿದರು.

 

ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್‌ ಕುಮಾರ್ ಮಾತನಾಡಿ, ಮುಂದಿನ ಕಾರ್ಯಯೋಜನೆಗಳು, ಪಕ್ಷ ಸಂಘಟನೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮಾರ್ಗದರ್ಶನ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ ಪೂಜಾರಿ , ಜಿಲ್ಲೆಯ ಪಕ್ಷದ ಶಾಸಕರು, ಜಿಲ್ಲಾ ಘಟಕದ ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಘಟಕಗಳ ಅಧ್ಯಕ್ಷರು ಹಾಗೂ ಪ್ರಮುಖರು ಇದ್ದರು. ಕಸ್ತೂರಿ ಪಂಜ ಸ್ವಾಗತಿಸಿದರು.ರಾಮದಾಸ ಬಂಟ್ವಾಳ ಕಾರ್ಯಕ್ರಮ ನಿರೂಪಿಸಿದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

9 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

9 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

9 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

9 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

9 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

10 hours ago