ಮಂಗಳೂರು: ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ , ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ -Vishwanews24
ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ಗಾಳಿಯ ಒತ್ತಡದಿಂದಾಗಿ ದಕ್ಷಿಣ ಕನ್ನಡ ಹಾಗೂ ನೆರೆಯ ಕಾಸರಗೋಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಿಲ್ಲೆಯಲ್ಲಿ ಮುಂದಿನ ಎರಡು ದಿನ ಕೂಡ ಗುಡುಗು-ಮಿಂಚಿನಿಂದ ಕೂಡಿದ ಭಾರೀ ಮಳೆಯಾಗಲಿದೆ. ಗಂಟೆಗೆ 60ರಿಂದ 65 ಕಿ.ಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.
ಅರಬೀ ಸಮುದ್ರದಲ್ಲಿ ಲಕ್ಷದ್ವೀಪದದಲ್ಲಿ ವಾಯುಭಾರ ಕುಸಿತವಾಗಿದ್ದು, ಗಾಳಿಯ ಒತ್ತಡದಿಂದ ದಕ್ಷಿಣ ಕನ್ನಡ ಹಾಗೂ ಕೇರಳದ ಕಾಸರಗೋಡಿನಲ್ಲಿ ಮಳೆಯಾಗಲಿದೆ. ಈ ಹಿನ್ನೆಲೆ ಆರೆಂಜ್ ಆಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
