ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಗೂಂಡಾ ವರ್ತನೆ ತೋರಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಅವರು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಆಯುಕ್ತರನ್ನು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ ಬಳಿಕ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಅಧಿಕಾರ ತೆಗೆದುಕೊಂಡ ಬಳಿಕ ಬಿಜೆಪಿ, ವಿಎಚ್ ಪಿ, ಬಜರಂಗದಳದ ಕಾರ್ಯಕರ್ತರ ಮನೆಮನೆಗೆ ಪೊಲೀಸರು ಮಧ್ಯರಾತ್ರಿ ಬಾಗಿಲು ತಟ್ಟಿ ಗೂಂಡಾ ರೀತಿಯ ವರ್ತನೆ ತೋರಿಸುತ್ತಿದ್ದಾರೆ. ರಾಜ್ಯ ಸರಕಾರದ ಒತ್ತಡಕ್ಕೆ ಮಣಿದು ಪೊಲೀಸರು ಈ ರೀತಿಯ ವರ್ತನೆ ತೋರಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಈ ಕ್ರಮವನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದೆ ಹೋದರೆ ಪೊಲೀಸರ ವಿರುದ್ಧ ಹೋರಾಟ ನಡೆಸುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ಎನ್ ಐಎ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹ ಮಾಡಿದರೂ ಕ್ರಮ ಕೈಗೊಳ್ಳದೆ ಇದ್ದಾಗ ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರ ಸರಕಾರ ಸಮ್ಮತಿಸಿದೆ. ಅದಕ್ಕಾಗಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ನಿಲುವನ್ನು ಸ್ವಾಗತಿಸುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ. ಪೊಲೀಸ್ ಇಲಾಖೆ ಸರಕಾರದ ಕೈ ಗೊಂಬೆಯಂತೆ ವರ್ತಿಸಬಾರದು. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತಾಗಲಿ ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…