Featured

ಮಂಗಳೂರು: ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಗೂಂಡಾ ವರ್ತನೆ ತೋರಿಸುತ್ತಿದ್ದಾರೆ : ಬಿವೈ ವಿಜಯೇಂದ್ರ ಆರೋಪ – vishwnaews24

ಮಂಗಳೂರಿನಲ್ಲಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಗೂಂಡಾ ವರ್ತನೆ ತೋರಿಸುತ್ತಿದ್ದಾರೆ : ಬಿವೈ ವಿಜಯೇಂದ್ರ ಆರೋಪ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರ್ಕಾರದ ಒತ್ತಡಕ್ಕೆ ಮಣಿದು ಪೊಲೀಸರು ಗೂಂಡಾ ವರ್ತನೆ ತೋರಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಅವರು  ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಆಯುಕ್ತರನ್ನು ಹಾಗೂ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ ಬಳಿಕ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸ್ ಆಯುಕ್ತರು ಅಧಿಕಾರ ತೆಗೆದುಕೊಂಡ ಬಳಿಕ ಬಿಜೆಪಿ, ವಿಎಚ್ ಪಿ, ಬಜರಂಗದಳದ ಕಾರ್ಯಕರ್ತರ ಮನೆಮನೆಗೆ ಪೊಲೀಸರು ಮಧ್ಯರಾತ್ರಿ ಬಾಗಿಲು ತಟ್ಟಿ ಗೂಂಡಾ ರೀತಿಯ ವರ್ತನೆ ತೋರಿಸುತ್ತಿದ್ದಾರೆ. ರಾಜ್ಯ ಸರಕಾರದ ಒತ್ತಡಕ್ಕೆ ಮಣಿದು ಪೊಲೀಸರು ಈ ರೀತಿಯ ವರ್ತನೆ ತೋರಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಈ ಕ್ರಮವನ್ನು ತಕ್ಷಣ ನಿಲ್ಲಿಸಬೇಕು. ಇಲ್ಲದೆ ಹೋದರೆ ಪೊಲೀಸರ ವಿರುದ್ಧ ಹೋರಾಟ ನಡೆಸುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಜ್ಯ ಸರಕಾರ ಎನ್ ಐಎ ತನಿಖೆಗೆ ಒಪ್ಪಿಸಬೇಕೆಂದು ಆಗ್ರಹ ಮಾಡಿದರೂ ಕ್ರಮ ಕೈಗೊಳ್ಳದೆ ಇದ್ದಾಗ ನಾವು ರಾಜ್ಯಪಾಲರನ್ನು ಭೇಟಿ ಮಾಡಿ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದೇವೆ. ಕೇಂದ್ರ ಸರಕಾರ ಸಮ್ಮತಿಸಿದೆ. ಅದಕ್ಕಾಗಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ನಿಲುವನ್ನು ಸ್ವಾಗತಿಸುವುದಾಗಿ ವಿಜಯೇಂದ್ರ ತಿಳಿಸಿದ್ದಾರೆ. ಪೊಲೀಸ್ ಇಲಾಖೆ ಸರಕಾರದ ಕೈ ಗೊಂಬೆಯಂತೆ ವರ್ತಿಸಬಾರದು. ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತಾಗಲಿ ಎಂದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago