Featured

ಮಂಗಳೂರು :  ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ಕದಡಲು ಕಾಂಗ್ರೆಸ್ ಸರ್ಕಾರವೇ ನೇರ ಕಾರಣ :  ಸತೀಶ್ ಕುಂಪಲ ಆರೋಪ – vishwanews24

ಮಂಗಳೂರು :  ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ಕದಡಲು ಕಾಂಗ್ರೆಸ್ ಸರ್ಕಾರವೇ ನೇರ ಕಾರಣ :  ಸತೀಶ್ ಕುಂಪಲ ಆರೋಪ

ಮಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಪ್ರತಿ ಸಂಧರ್ಭದಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ಸೃಷ್ಟಿಯಾಗುತ್ತದೆ. ಓಲೈಕೆ ರಾಜಕಾರಣ, ಪೊಲೀಸ್ ಇಲಾಖೆಯಲ್ಲಿ ಅತಿಯಾದ ಹಸ್ತಕ್ಷೇಪ, ಸಮಾಜಘಾತುಕ ಶಕ್ತಿಗಳ ಪೋಷಣೆ ಯಿಂದಾಗಿ ಜಿಲ್ಲೆಯಲ್ಲಿ ಶಾಂತಿ, ಸಾಮರಸ್ಯ ಕದಡಲು ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿ.ಜೆ.ಪಿ. ಅಧ್ಯಕ್ಷರಾದ ಸತೀಶ್ ಕುಂಪಲ ಆರೋಪಿಸಿದರು.

ಸುಹಾಸ್ ಶೆಟ್ಟಿ ಹತ್ಯೆ ಸಂಧರ್ಭದಲ್ಲಿ ರಾಜ್ಯದ ಗೃಹ ಸಚಿವರು ಒಂದು ಸಮುದಾಯದ ನಾಯಕರ ಬಳಿ ಸಭೆ ನಡೆಸಿರುವುದು. ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಪದೇಪದೇ ಸುಹಾಸ್ ಶೆಟ್ಟಿ ಯನ್ನು ರೌಡಿಶೀಟರ್ ಎನ್ನುತ್ತಾ ಅಲ್ಪಸಂಖ್ಯಾತರನ್ನು ಸಂತುಷ್ಠಿ ಗೊಳಿಸಲು ಪ್ರಯತ್ನಿಸಿರುವುದು, ಸುಹಾಸ್ ಶೆಟ್ಟಿ ಅಂತಿಮ ಯಾತ್ರೆ ಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಜಿಲ್ಲೆಯ ಬಿ.ಜೆ.ಪಿ. ನಾಯಕರು, ಶಾಸಕರು, ಹಿಂದು ಸಂಘಟನೆಯ ಪ್ರಮುಖರು ಕಾಳಜಿ ವಹಿಸಿದ್ದರು. ಆದರೂ ಹಿಂದು ನಾಯಕರಾದ ಶರಣ್ ಪಂಪವೆಲ್, ಬುಜಂಗ ಕುಲಾಲ್ ರವರನ್ನು ಬಂದಿಸಲಾಯಿತು. ಸರ್ಕಾರದ ಇಂತಹ ತಾರತಮ್ಯ, ತುಷ್ಠಿಕರಣದ ಇಬ್ಬಗೆ ನೀತಿಯಿಂದ ಜಿಲ್ಲೆಯ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ಜಿಲ್ಲೆಯ ಉಸ್ತುವಾರಿ ಸಚಿವರು ಬೆಂಗಳೂರಿನಲ್ಲಿ ಕೂತು ಜಿಲ್ಲೆಯ ವಿಚಾರದ ಬಗ್ಗೆ ಸ್ಪಷ್ಟ ಮಾಹಿತಿಯಿಲ್ಲದೆ ಮಾತನಾಡುವ ಬದಲು ಇಲ್ಲಿನ ವಾಸ್ತವ ಅರಿತು ಜವಾಬ್ದಾರಿ ಯಿಂದ ಮಾತನಾಡಲಿ. ನಿನ್ನೆ ಅಘೋಷಿತ ಬಂದ್ ಮಾಡಿ ದಾರಿಯುದ್ದಕ್ಕೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿರುವವರ ಬಗ್ಗೆ ಯಾವ ಕ್ರಮ ಕೈಗೊಂಡಿದ್ದೀರಿ. ಹಿಂದು ನಾಯಕರಿಗೆ ಬಹಿರಂಗ ವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಕೊಲೆ ಬೆದರಿಕೆ ಹಾಕುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದಿರುವುದಕ್ಕೆ ಪೊಲೀಸ್ ಇಲಾಖೆಯ ಮೇಲೆ ಕಾಂಗ್ರೆಸ್ ಸರ್ಕಾರದ ಒತ್ತಡವೇ ಕಾರಣ. ಕಾಂಗ್ರೆಸ್ ನ ಮುಸ್ಲಿಂ ನಾಯಕರು ರಾಜೀನಾಮೆ ನೀಡುತ್ತಿರುವುದು ಒಂದು ಪ್ರಹಸನ. ಇದು ಹಿಂದುಗಳ ಮೇಲೆ ಮತ್ತಷ್ಟು ದೌರ್ಜನ್ಯ ಎಸೆಗಲು ಸರ್ಕಾರಕ್ಕೆ ಮಾಡುತ್ತಿರುವ ಒತ್ತಡದ ಭಾಗವಾಗಿದೆ ಎಂದು ಕುಂಪಲ ಹೇಳಿದರು.

ಅಧಿಕಾರದ ಅಮಲಿನಲ್ಲಿರುವ ಕಾಂಗ್ರೆಸ್ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭಿವೃದ್ಧಿ ಯಂತು ಶೋಚನೀಯವಾಗಿದೆ. ಸಾಮರಸ್ಯದ ಬದುಕು ಮರೀಚಿಕೆಯಾಗಿದೆ. ಇನ್ನಾದರೂ ರಾಜ್ಯದ ಗೃಹಸಚಿವರು ಪೊಲೀಸ್ ಇಲಾಖೆಗೆ ನಿಷ್ಪಕ್ಷಪಾತವಾಗಿ, ಒತ್ತಡ ಮುಕ್ತವಾಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago