ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಜತೆ ಜನತೆ ಸಹಕರಿಸ ಬೇಕು. ಸಮಾಜಘಾತಕ ಶಕ್ತಿಗಳು ಹರಡುವ ಯಾವುದೇ ವದಂತಿಗಳಿಗೆ ಕಿವಿಗೊಡಬಾರದು. ಕಾಂಗ್ರೆಸ್ ಪಕ್ಷದ ನಾಯಕರು ಗಲಭೆಗೆ ಪ್ರಚೋದಿಸುವ ಹೇಳಿಕೆ ನೀಡುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‌ಕುಮಾರ್ ಕಟೀಲ್ ವಿನಂತಿಸಿದ್ದಾರೆ.
ಕೆಲವರು ಗಲಭೆಗೆ ಪ್ರಚೋದಿಸಿದ ಕಾರಣ ಮಂಗಳೂರಿನಲ್ಲಿ ಎರಡು ಜೀವ ಬಲಿಯಾಗಿದೆ. ಇಂತಹ ಘಟನೆಗಳು ದುರದೃಷ್ಟಕರ. ಮೃತರ ಕುಟುಂಬಕ್ಕೆ ಸರ್ಕಾರ ಸೂಕ್ತ ನ್ಯಾಯ ಒದಗಿಸಲಿದೆ. ಕಾಂಗ್ರೆಸ್ ನಾಯಕರು ಇಂತಹ ಸಂದರ್ಭದಲ್ಲೂ ರಾಜಕೀಯ ಲಾಭ ಪಡೆಯಲು ಅಸಂಬದ್ದ ಹೇಳಿಕೆ ನೀಡುತ್ತಿದ್ದಾರೆ. ಶಾಂತಿ ಕಾಪಾಡುವುದು ಎಲ್ಲರ ಕರ್ತವ್ಯ. ಆದರೆ ಕಾಂಗ್ರೆಸ್ ನಾಯಕರು ಇನ್ನಷ್ಟು ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.
ಮಂಗಳೂರು ನಗರ ಶಿಕ್ಷಣ ಹಾಗೂ ಉದ್ಯಮದ ಪ್ರಮುಖ ನಗರವಾಗಿ ದೇಶದಲ್ಲೇ ಗುರುತಿಸಿಕೊಂಡಿದೆ. ಇಂತಹ ಹಿಂಸಾಚಾರದ ಕೃತ್ಯಗಳಿಂದ ನಗರದ ಹೆಸರಿಗೆ ದಕ್ಕೆಯಾಗುತ್ತಿದೆ. ಉದ್ವಿಗ್ನ ಪರಿಸ್ಥಿತಿಯನ್ನು ಸದ್ಯ ನಿಯಂತ್ರಣಕ್ಕೆ ತರಲು ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ಅಹಿತಕರ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಎಲ್ಲರ ಸಹಕಾರ ಅಗತ್ಯ ಎಂದು ಸಂಸದರು ತಿಳಿಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…