ಮಂಗಳೂರು: ಜಿಲ್ಲೆಯಲ್ಲಿ ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪುನ: ಪ್ರಾರಂಭ : ಕೋಟಾ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವ ಭೀತಿಯ ಹಿನ್ನೆಲೆಯಲ್ಲಿ ಮೀನುಗಾರಿಕೆ ಚಟುವಟಿಕೆಯನ್ನು ಈ ಹಿಂದೆ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿತ್ತು. ಇದೀಗ ಸೆಪ್ಪಂಬರ್ 1 ರಿಂದ ಮೀನುಗಾರಿಕೆ ಪುನ: ಪ್ರಾರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.

 

ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮೀನುಗಾರಿಕೆ ಪುನರಾರಂಭ ಕುರಿತ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಆಗಸ್ಟ್ 1 ರಿಂದ ಮೀನುಗಾರಿಯನ್ನು ಪ್ರಾರಂಭ ಮಾಡುವಂತೆ ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಮುಂದಿನ ಸೆಪ್ಟೆಂಬರ್ ತಿಂಗಳಿಂದ ಮೀನುಗಾರಿಕೆಯನ್ನು ಪ್ರಾರಂಭ ಮಾಡಲಾಗುತ್ತದೆ ಎಂದು ತಿಳಿಸಿದರು.

ಮೀನುಗಾರಿಕೆಯಲ್ಲಿ ಶೇ.75 ರಷ್ಟು ಕಾರ್ಮಿಕರು ಹೊರ ರಾಜ್ಯದವರಾಗಿದ್ದು, ಅವರು ರಾಜ್ಯಕ್ಕೆ ಆಗಮಿಸುವ ಮೊದಲು ಸೇವಾ ಸಿಂಧೂವಿನಲ್ಲಿ ಅರ್ಜಿ ಸಲ್ಲಿಸಬೇಕು. ರಾಜ್ಯ ಪ್ರಯಾಣ ಬೆಳಸುವವರು ಕೋವಿಡ್ ಪರೀಕ್ಷೆಗೆ ಒಳಗಾಗಿ ನೆಗಟಿವ್ ವರದಿ ಬಂದ ಕಾರ್ಮಿಕರು ಮಾತ್ರ ನಮ್ಮ ಜಿಲ್ಲೆ ಪ್ರವೇಶಿಸಲು ಅವಕಾಶ ನೀಡಲಾಗುತ್ತದೆ. ಕೋವಿಡ್ ಮಾರ್ಗಸೂಚಿಯಂತೆ ಕಡ್ಡಾಯವಾಗಿ 14 ದಿನಗಳ ಕಾಲ ಕ್ವಾರೈಟೆನ್‍ನಲ್ಲಿ ಇರಬೇಕು. ಬರುವ ಕಾರ್ಮಿಕರ ಜವಬ್ದಾರಿಯನ್ನು ಸಂಬಂಧಿಸಿದ ಮೀನುಗಾರಿಕೆ ಮಾಲೀಕರು ನೋಡಿಕೊಳ್ಳಬೇಕು. ಹೊರ ರಾಜ್ಯದಿಂದ ಬಂದವರಿಗೆ ಕೋವಿಡ್ ಪರೀಕ್ಷೆಯನ್ನು ಜಿಲ್ಲಾಡಳಿತದ ವತಿಯಿಂದ ಉಚಿತವಾಗಿ ನಡೆಸಿ ಬೋಟ್‍ನಲ್ಲಿ 3 ಮೀಟರ್ ಅಂತರ ಕಾಯ್ದುಕೊಂಡು ಹೋಂ ಕ್ವಾರೈಟೆನ್‍ನಲ್ಲಿ ಇರಲು ಅವಕಾಶ ನೀಡಲಾಗಿದೆ. ಇದರ ಜವಾಬ್ದಾರಿ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು. ಮಾರುಕಟ್ಟೆಯನ್ನು ಪ್ರತಿನಿತ್ಯ ಸ್ಯಾನಿಟೈಜರ್ ಮಾಡುವುದು ಕಡ್ಡಾಯವಾಗಿದ್ದು, ಮುಂದಿನ ದಿನದಲ್ಲಿ ಮೀನುಗಾರಿಕೆಯಲ್ಲಿ ಹೆಚ್ಚಿನ ಅಭಿವೃದ್ಧಿಗಳನ್ನು ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಸಭೆಯಲ್ಲಿ ಆರೋಗ್ಯಾಧಿಕಾರಿ ರಾಮಚಂದ್ರ ಬಾಯಾರಿ, ಪಾಶ್ರ್ವನಾಥ, ದಿನೇಶ್ ಕುಮಾರ್ ಕಳ್ಳೇರ, ವಿವಿಧ ಸಂಘದ ಅಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಮತ್ತಿತರು ಉಪಸ್ಥಿತರಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago