Featured

ಮಂಗಳೂರು : ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಚರ್ಮಗಂಟು ರೋಗ –  ನೂರಾರು ಜಾನುವಾರುಗಳು ಸಾವು – Vishwanews24

ಮಂಗಳೂರು : ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಚರ್ಮಗಂಟು ರೋಗ –  ನೂರಾರು ಜಾನುವಾರುಗಳು ಸಾವು

ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂಬ ಆತಂಕ, ಹೈನುಗಾರಿಕೆ ಕೃಷಿಕರು ಕಂಗಾಲು..

ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ..

ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ  : ಪ್ರಭು ಚೌಹ್ವಾಣ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಾನುವಾರುಗಳ ಚರ್ಮ‌ಗಂಟು ರೋಗ ದಿನೇ ದಿನೇ ಉಲ್ಬಣಗೊಂಡಿದ್ದು, ಹೈನುಗಾರಿಕೆ ಕೃಷಿಕರು ಕಂಗಾಲಾಗಿದ್ದಾರೆ. ಅಪಾಯಕಾರಿ ಚರ್ಮ ಗಂಟು ರೋಗದ ಬಾಧೆಯಿಂದ ನೂರಾರು ಜಾನುವಾರುಗಳು ಸಾವನಪ್ಪಿದ್ದು, ರೋಗ ನಿಯಂತ್ರಣಕ್ಕೆ ಬರುತ್ತಿಲ್ಲ ಎಂಬ ಆತಂಕ ಕೃಷಿಕರದ್ದು ಹಾಗೂ ಪಶುಸಂಗೋಪನೆ ಇಲಾಖೆಯದ್ದು.

ಕಳೆದ ಕೆಲ ಸಮಯದಿಂದ ಜಾನುವಾರುಗಳಲ್ಲಿ ಮಾರಣಾಂತಿಕ ಕಾಯಿಲೆ ಕಾಣಿಸಿಕೊಂಡಿದ್ದು, ಸಾವಿರಾರು ರೂಪಾಯಿಗಳ ನಷ್ಟವನ್ನು ಕೃಷಿಕರು ಅನುಭವಿಸಿದ್ದಾರೆ. ಇಲಾಖೆ ಈ ಬಗ್ಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ಮನೆಮನೆಗೆ ತೆರಳಿ ಇಂಜೆಕ್ಷನ್‌ ನೀಡುವ ಕೆಲಸ ಪ್ರಾಥಮಿಕ ಹಂತದಲ್ಲಿ ಮಾಡಿದೆ, ಈ ಬಗ್ಗೆ ಜಾಗೃತಿ ಕಾರ್ಯಕ್ರಮ ಗಳನ್ನು ಹಮ್ಮಿಕೊಂಡು ಶಿಬಿರಗಳನ್ನು ನಡೆಸಿದೆ.

ಆದರೆ ಲಸಿಕೆ ನೀಡಿದ ಬಳಿಕವೂ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಹಲವು ಜಾನುವಾರುಗಳು ಸಾವನ್ನಪ್ಪಿವೆ.

ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ.. ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ  : ಪ್ರಭು ಚೌಹ್ವಾಣ್

ರಾಜ್ಯದಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಜನವರಿ 15 ರ ವೇಳೆಗೆ ಎಲ್ಲಾ ಜಾನುವಾರುಗಳಿಗೆ ಲಸಿಕೆ ನೀಡಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹ್ವಾಣ್ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಚರ್ಮಗಂಟು ರೋಗ ನಿಯಂತ್ರಿಸುವ ಸಲುವಾಗಿ ಈಗಾಗಲೇ 92 ಲಕ್ಷ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದೆ. ಮುಂದಿನ ವರ್ಷದ ಜನವರಿ 15 ರ ವೇಳೆಗೆ ಎಲ್ಲಾ ರಾಸುಗಳಿಗೆ ಲಸಿಕೆ ನೀಡಲಾಗುವುದು ಎಂದು ಹೇಳಿದ್ದಾರೆ.

ರಾಸುಗಳಿಗೆ ಚರ್ಮಗಂಟು ರೋಗ 22 ರಾಜ್ಯಗಳಲ್ಲಿ ಬಂದಿದೆ. ರಾಜಸ್ಥಾನದಲ್ಲಿ 75 ಸಾವಿರ ಸಾವು ಸಂಭವಿಸಿದ್ದು, ರಾಜ್ಯದಲ್ಲಿ ಈವರೆಗೆ 22 ಸಾವಿರ ರಾಸುಗಳಿಗೆ ಮಾತ್ರ ಸಾವನ್ನಪ್ಪಿವೆ ಎಂದು ಮಾಹಿತಿ ನೀಡಿದ್ದಾರೆ.

 

Vishwa News 24

Recent Posts

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

10 minutes ago

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ – vishwanews24

ಸುರತ್ಕಲ್ ಎನ್‌ಐಟಿಕೆಯಲ್ಲಿ ನಿವೃತ್ತ ಮಿಗ್-21 ಯುದ್ಧ ವಿಮಾನ ಅನಾವರಣ  ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ (ಎನ್‌ಐಟಿಕೆ)ಯ ಮುಂಭಾಗದಲ್ಲಿ…

2 hours ago

ತುಳು ಲಿಪಿಗೆ ಡಿಜಿಟಲ್ ಸ್ಪರ್ಶ: ಸ್ಮಾರ್ಟ್‌ಫೋನ್‌ಗಳಲ್ಲಿ ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ – vishwanews24

ಡಿಜಿಟಲ್ ಜಗತ್ತಿಗೆ ತುಳು ಲಿಪಿಯ ಹೊಸ ಹೆಜ್ಜೆ: ‘ಕುರಲ್ ತುಳು ಟಚ್’ ಕೀಬೋರ್ಡ್ ಬಿಡುಗಡೆ ಮಂಗಳೂರು: ಕರಾವಳಿ ಕರ್ನಾಟಕದ ಹೆಮ್ಮೆಯ…

2 hours ago

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ – vishwanews24

ಶಿರ್ವ : ಸೂಡ ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು, ಶಾಲಾ ಮಕ್ಕಳಲ್ಲಿ ಆತಂಕ ಶಿರ್ವ: ಸೂಡ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ…

2 hours ago

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ – vishwanews24

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ ನವದೆಹಲಿ: ಭಾರತೀಯ ವಾಯುಪಡೆಯ ಮುಂದಿನ ಮುಖ್ಯಸ್ಥರಾಗಿ ಏರ್…

2 hours ago

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು – vishwanews24

ಕಾರ್ಕಳ : ಮನೆಯ ಗೋಡೌನ್‌ನಿಂದ 95 ಸಾವಿರ ರೂ. ಮೌಲ್ಯದ ಅಡಿಕೆ ಕಳವು ಕಾರ್ಕಳ: ತಾಲೂಕಿನ ಮಿಯ್ಯಾರು ಗ್ರಾಮದ ಮನೆಯೊಂದರ…

3 hours ago