Featured

ಮಂಗಳೂರು : ಜಿಲ್ಲೆಯಲ್ಲಿ 6 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ -Vishwanews24

ದ.ಕ ಜಿಲ್ಲೆಯಲ್ಲಿ 6 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಚಾಲನೆ

ಮಂಗಳೂರು, : ದ.ಕ ಜಿಲ್ಲೆಯಾದ್ಯಂತ 6 ಕೇಂದ್ರಗಳಲ್ಲಿ ಕೊರೊನಾ ನಿಯಂತ್ರಣ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಚಾಲನೆ ನೀಡಿದರು.

ಕಾರ್ಯಕ್ರಮವು ಸರ್ಕಾರಿ ವೆನ್ಲಾಕ್‌‌ ಆಸ್ಪತ್ರೆಯ ಆಯುಷ್‌‌‌ ವಿಭಾಗದಲ್ಲಿ ನಡೆಯಿತು. ಈ ಸಂದರ್ಭ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್ ಸೇರಿ ಇತರರು ಉಪಸ್ಥಿತರಿದ್ದರು.

ದ.ಕ ಜಿಲ್ಲೆಗೆ 24,000 ಡೋಸ್‌ ಕೊರೊನಾ ಲಸಿಕೆ ವಿತರಣೆಯಾಗಿದ್ದು, ಜಿಲ್ಲೆಯ 6 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತದೆ. ಜಿಲ್ಲೆಯಲ್ಲಿ ಒಟ್ಟು 52,381 ಗುರುತಿಸಲಾದ ಫಲಾನುಭವಿಗಳಿಗೆ ವಿತರಿಸಲಾಗುತ್ತದೆ. ದ.ಕ ಜಿಲ್ಲಾ ವೆನ್ಲಾಕ್‌‌ ಆಸ್ಪತ್ರೆ ಮಂಗಳೂರು ಆಯುಷ್‌ ವಿಭಾಗ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್‌‌, ತಾಲೂಕು ಆಸ್ಪತ್ರೆ ಬಂಟ್ವಾಳ, ತಾಲೂಕು ಆಸ್ಪತ್ರೆ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಪುತ್ತೂರು, ತಾಲೂಕು ಆಸ್ಪತ್ರೆ ಸುಳ್ಯದಲ್ಲಿ ಈ ಲಸಿಕೆ ನೀಡಲಾಗುತ್ತದೆ.

ಒಂದು ಲಸಿಕಾ ಶಿಬಿರದಲ್ಲಿಒಂದು ದಿನಕ್ಕೆ ನೂರು ಮಂದಿ ಫಲಾನುಭವಿಗಳಿಗೆ ಮಾತ್ರ ಲಸಿಕೆ ವಿತರಣೆಯಾಗಲಿದ್ದು, ಲಸಿಕಾ ಶಿಬಿರವು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಫಲಾನುಭವಿಗಳಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುವುದು. ಶಿಬಿರದಲ್ಲಿ ಲಸಿಕೆಗೆ ಯಾವುದೇ ಫಲಾನುಭವಿಗಳಿಗೆ ನೋಂದಣಿ ಇರುವುದಿಲ್ಲ. ಈಗಾಗಲೇ ನೋಂದಣಿಯಾಗಿರುವ ಫಲಾನುಭವಿಗಳನ್ನು ಗುರುತಿಸಿ ಲಸಿಕೆ ನೀಡಲಾಗುವುದು.

ಕೊರೊನಾ ವ್ಯಾಕ್ಸಿನೇಷನ್‌ ಆದ ಬಳಿಕ 30 ನಿಮಿಷಗಳ ಕಾಲ ಪ್ರತಿಯೋರ್ವ ಫಲಾನುಭವಿಯೂ ವಿಶ್ರಾಂತಿ ಪಡೆದುಕೊಳ್ಳಬೇಕು. ಆರೋಗ್ಯ ಕಾರ್ಯಕರ್ತರ ನಿಗಾವಣೆಯಲ್ಲಿ ಕಡ್ಡಾಯವಾಗಿ ವಿಶ್ರಾಂತಿ ಪಡೆದುಕೊಳ್ಳಬೇಕು. ಲಸಿಕೆಯ ಬಳಿಕ ಒಂದುವೇಳೆ ಅಡ್ಡ ಪರಿಣಾಮ ಕಾಣಿಸಿಕೊಂಡಲ್ಲಿ ವೈದ್ಯಕೀಯ ತಂಡದ ಮೂಲಕ ಚಿಕಿತ್ಸೆಗೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿರುತ್ತದೆ. ಒಟ್ಟು 89 ಸರಕಾರಿ ಹಾಗೂ 17 ಖಾಸಗಿ ಸಂಸ್ಥೆಗಳನ್ನು ಲಸಿಕೆ ನೀಡಲು ಗುರುತಿಸಲಾಗಿದೆ.

http://ಬೆಳ್ತಂಗಡಿ : ಸರಕಾರಿ ಆಸ್ಪತ್ರೆಯಲ್ಲಿ ಕೊರೋನ ಲಸಿಕೆ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜಾ ಚಾಲನೆ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago