ಮಂಗಳೂರು: ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಜಿಲ್ಲೆಯಾದ್ಯಂತ ಧಾರಾಕಾರ ಮಳೆ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಂದು ಗುರುವಾರ ಧಾರಾಕಾರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಮಂಗಳೂರು ನಗರದಲ್ಲಿ ಬಹುತೇಕ ಕಡೆ ರಸ್ತೆಗಳಲ್ಲೆಲ್ಲಾ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ನಗರದಾದ್ಯಂತ ಸಂಚಾರ ದಟ್ಟಣೆ ಉಂಟಾಗಿದೆ.

ಮಂಗಳೂರು ನಗರದ ಪಡೀಲು, ಪಂಪ್ ವೆಲ್, ಬೆಜೈ, ಅತ್ತಾವರ, ನೀರುಮಾರ್ಗಗಳಲ್ಲೆಲ್ಲಾ ಸಾಮಾನ್ಯ ಜನಜೀವನ ಅಸ್ತವ್ಯಸ್ತವಾಗಿದೆ. ಹೊರಗೆ ವ್ಯವಹಾರಕ್ಕೆ, ಕಚೇರಿಗೆಂದು ವಾಹನಗಳಲ್ಲಿ ಹೋದವರಿಗೆ ಅಲ್ಲಲ್ಲಿ ನೀರು ತುಂಬಿಕೊಂಡು ಚಲಿಸಲಾಗದೆ ಸಿಕ್ಕಿಹಾಕಿಕೊಂಡಿದ್ದಾರೆ. ತಗ್ಗು ಪ್ರದೇಶದ ಮನೆಗಳು, ಕಟ್ಟಡಗಳಿಗೆ ನೀರು ನುಗ್ಗಿವೆ.ಕೊಟ್ಟಾರ ಚೌಕಿ ಬಳಿ ರಾಜಕಾಲುವೆ ತುಂಬಿ ಹರಿದಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಮರವೂರು ಸೇತುವೆ ಹತ್ತಿರದ ರಸ್ತೆಗಳು ಧಾರಾಕಾರ ಮಳೆಗೆ ಹಾನಿಗೀಡಾಗಿದ್ದು ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ಬಾರಿ ಮಳೆ ; ಮರವೂರು ಸೇತುವೆ ಬಳಿ ರಸ್ತೆ ಕುಸಿತ – Vishwanews24

Leave a Reply