Featured

ಮಂಗಳೂರು : ಜಿಲ್ಲೆಯ ಕಾಲೇಜುಗಳಿಗೆ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ದಸರಾ ರಜೆ -Vishwanews24

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೊಳಪಟ್ಟಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ, ಸ್ವಾಯತ್ತ, ಘಟಕ ಪದವಿ ಮಟ್ಟದ ಕಾಲೇಜುಗಳಿಗೆ ಇದೇ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 15 ರವರೆಗೆ ದಸರಾ ರಜೆ ನೀಡುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಾಸಕ ಕಾಮತ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಪ್ಟೆಂಬರ್ 30 ರಿಂದಲೇ ನವರಾತ್ರಿಯ ಧಾರ್ಮಿಕ ವಿದಿವಿಧಾನಗಳನ್ನು ಆರಂಭವಾಗುತ್ತವೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರಸಿದ್ಧ ದೇವಾಲಯಗಳಲ್ಲಿ ವಿಶೇಷ ಕಾರ್ಯಕ್ರಮಗಳು ನಡೆಯುತ್ತವೆ.

ಆದ್ದರಿಂದ ಸೆಪ್ಟೆಂಬರ್ 30 ರಿಂದ ರಜೆಗಳು ಆರಂಭವಾದ್ದಲ್ಲಿ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ, ವಿದ್ಯಾರ್ಥಿನಿಯರಿಗೆ, ಶಿಕ್ಷಕರಿಗೆ, ಶಿಕ್ಷಕೇತರರಿಗೆ ದೇವಿ ದೇವಸ್ಥಾನಗಳಲ್ಲಿ ನಡೆಯುವ ವಿಶೇಷ ಪೂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಬಹುದಾಗಿದೆ. ಅದಕ್ಕಾಗಿ ರಜೆಯನ್ನು ಸೆಪ್ಟೆಂಬರ್ 30 ರಿಂದಲೇ ಮಂಜೂರು ಮಾಡಬೇಕು ಎಂದು ತಾವು ಉನ್ನತ ಶಿಕ್ಷಣ ಮತ್ತು ಉಪಮುಖ್ಯಮಂತ್ರಿಯೂ ಆಗಿರುವ ಅಶ್ವಥ್ ನಾರಾಯಣ್ ಅವರಿಗೆ ಮನವಿ ಮಾಡಿದ್ದೆ.

ನನ್ನ ಮನವಿಯನ್ನು ಪುರಸ್ಕರಿಸಿ ಆಶ್ವಥ್ ನಾರಾಯಣ್ ಅವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸುತ್ತೋಲೆ ನೀಡಿದ್ದಾರೆ. ಅದನ್ನು ಆದರಿಸಿ ಕುಲಸಚಿವರು ರಜೆ ನೀಡಲು ಸೂಚಿಸಿದ್ದಾರೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ. ಈಗಾಗಲೇ ಶಾಸಕ ಕಾಮತ್ ಅವರ ಮನವಿಯ ಮೇರೆಗೆ ಪ್ರಾರ್ಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ದಸರಾ ರಜೆಯನ್ನು ಮಂಜೂರು ಮಾಡಿದ್ದನ್ನು ಸ್ಮರಿಸಬಹುದು. ತಮ್ಮ ಮನವಿಯನ್ನು ಪುರಸ್ಕರಿಸಿದ ರಾಜ್ಯ ಸರಕಾರಕ್ಕೆ ಧನ್ಯವಾದವನ್ನು ಶಾಸಕ ಕಾಮತ್ ಸಲ್ಲಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

6 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

8 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

8 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

9 hours ago