ಮಂಗಳೂರು : ಜು. 22ರಿಂದ ಮಂಗಳೂರು ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಹೆಚ್ಚುವರಿ ವಿಮಾನಗಳ ಹಾರಾಟ ಆರಂಭವಾಗಲಿದ್ದು, ಪ್ರತಿದಿನ ವಿಮಾನ ಹಾರಾಟ ನಡೆಸಲಿದೆ.
ಸದ್ಯ ವಾರಕ್ಕೆ ನಾಲ್ಕು ದಿನ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಅಬುಧಾಬಿಗೆ ಸಂಚರಿಸುತ್ತಿದೆ. ಇದೀಗ ಜುಲೈ 22ರಿಂದ ಪ್ರತಿದಿನ ಹಾರಾಟ ನಡೆಸಲಿದೆ. ಜು. 22ರಂದು ರಾತ್ರಿ 8.15ಕ್ಕೆ ಮಂಗಳೂರಿನಿಂದ ಐಎಕ್ಸ್ 819 ವಿಮಾನ ಹೊರಡಲಿದೆ. ಇನ್ನು ಅಬುಧಾಬಿಯಿಂದ ಹೊರಡುವ ವಿಮಾನ ಬೆಳಗ್ಗೆ 5.20ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದೆ.
ಈಗಾಗಲೇ ಏರ್ ಇಂಡಿಯಾ ಎಕ್ಸ್‌ಪ್ರೆಸ್ 4 ವಿಮಾನಗಳು ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರದಂದು ಅಬುಧಾಬಿಗೆ ಸಂಚರಿಸುತ್ತಿವೆ. ಇದೀಗ ವಾರದ ಉಳಿದ ದಿನಗಳೂ ಹೊಸ ವಿಮಾನ ಸೇವೆ ಆರಂಭವಾಗಲಿದೆ.
ಈ ನಡುವೆ ಇಂಡಿಗೋ ವಿಮಾನಯಾನ ಸಂಸ್ಥೆಯ ವಿಮಾನವು ಅಬುಧಾಬಿಗೆ ಆಗಸ್ಟ್ 9ರಿಂದ ಪ್ರತಿದಿನ ಹಾರಾಟ ನಡೆಸಲಿದೆ. ಅಬುಧಾಬಿಯಿಂದ ಸಂಜೆ 4ಕ್ಕೆ ಒಂದು ವಿಮಾನ ಮಂಗಳೂರಿನಲ್ಲಿ ಲ್ಯಾಂಡ್ ಆಗುತ್ತದೆ. ರಾತ್ರಿ 9.40ಕ್ಕೆ ಮತ್ತೊಂದು ವಿಮಾನ ಮಂಗಳೂರಿನಿಂದ ಹೊರಡಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…