ಮಂಗಳೂರು,: ನಗರದ ಹಂಪನ ಕಟ್ಟೆಯ ಜುವೆಲ್ಯರಿಯೊಂದರಲ್ಲಿ ಕಳೆದ ಶುಕ್ರವಾರ ಹಾಡುಹಗಲೇ ನಡೆದ ಸಿಬ್ಬಂದಿ ಕೊಲೆ, ಅಂಗಡಿ ದರೋಡೆ ಪ್ರಕರಣದ ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣದ ಶಂಕಿತ ಆರೋಪಿಯ ಸಿಸಿ ಕೆಮರಾ ಚಿತ್ರವನ್ನು ಪೊಲೀಸರು ಬಹಿರಂಗಪಡಿಸಿದ್ದಾರೆ.
ಕಪ್ಪು ಬಣ್ಣದ ಜರ್ಕಿನ್, ಜೀನ್ಸ್ ಪ್ಯಾಂಟ್ ಧರಿಸಿ, ಶೂ ಧರಿಸಿದ್ದು, ಹೆಗಲಿನಲ್ಲಿ ಬ್ಯಾಗ್ ಹಾಕಿಕೊಂಡಿದ್ದು, ಗುರುತು ಮರೆಮಾಚಲು ಕ್ಯಾಪ್, ಮಾಸ್ಕ್, ಕೂಲಿಂಗ್ ಗ್ಲಾಸ್ ಧರಿಸಿಕೊಂಡಿರುವ ಶಂಕಿತ ಆರೋಪಿಯ ಸಿಸಿ ಕೆಮರಾದಲ್ಲಿ ಸೆರೆ ಸಿಕ್ಕ ಪೋಟೋ ಬಿಡುಗಡೆಗೊಳಿಸಿದ್ದಾರೆ.
ಈ ವ್ಯಕ್ತಿಯ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಅದನ್ನು ಪೊಲೀಸರಿಗೆ ನೀಡುವಂತೆ ಕೋರಲಾಗಿದ್ದು ಮಾಹಿತಿದಾರರ ಗೌಪ್ಯತೆ ಕಾಪಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಜುವೆಲ್ಯರಿಯೊಂದಕ್ಕೆ ಹಾಡುಹಗಲೇ ನುಗ್ಗಿದ್ದ ದುಷ್ಕರ್ಮಿ ಸಿಬಂದಿ ರಾಘವ ಆಚಾರ್ಯ (55) ಅವರಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿ ಒಟ್ಟು 12 ಗ್ರಾಂ ತೂಕದ 60,000 ರೂ. ಮೌಲ್ಯದ 3 ಚಿನ್ನದ ಸರಗಳನ್ನು ದರೋಡೆ ಮಾಡಿ ಪರಾರಿಯಾಗಿದ್ದ.
ಸಾರ್ವಜನಿಕರಿಗೆ ಮಾಹಿತಿ ಇದ್ದಲ್ಲಿ ಸಂಪರ್ಕಿಸಿಬೇಕಾದ ಪೊಲೀಸ್ ಅಧಿಕಾರಿಗಳು: ಪಿ ಎ ಹೆಗಡೆ -ಎಸಿಪಿ ಸಿಸಿಬಿ, ಮಂಗಳೂರು ನಗರ -ಮೊ: 9945054333,
ಮಹೇಶ್ ಕುಮಾರ್ , ಎಸಿಪಿ ಕೇಂದ್ರ ಉಪವಿಭಾಗ, ಮಂಗಳೂರು ನಗರ – ಮೊ: 9480805320
ಮಾಹಿತಿದಾರರ ವಿವರವನ್ನು ಗೌಫ್ಯವಾಗಿಡಲಾಗುವುದು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…