ಮಂಗಳೂರು: ಕಳೆದ ಹಲವು ದಿನದಿಂದ ಸುರಿದ ಭಾರೀ ಮಳೆಯಿಂದಾಗಿ ರಾ.ಹೆ.66ರ ಕೆಐಒಸಿಎಲ್ ಜಂಕ್ಷನ್ ಮತ್ತು ಕೂಳೂರು ಕಮಾನು ಸೇತುವೆಯ ನಡುವಿನ ಸಂಪರ್ಕದ ರಸ್ತೆ ಸಂಪೂರ್ಣ ಹಾನಿಯಾಗಿದೆ. ಅದನ್ನು ದುರಸ್ತಿಪಡಿಸುವ ಸಲುವಾಗಿ ಜು.21ರ ರಾತ್ರಿ 8ರಿಂದ 24ರವರೆಗೆ ಬೆಳಗ್ಗೆ 8ರವರೆಗೆ ಈ ಸೇತುವೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಲು ಎನ್‌ಎಚ್‌ಎಐ ಮುಂದಾಗಿದೆ.
ಈ ರಸ್ತೆಯು ಸಾರ್ವಜನಿಕರ, ವಾಹನಿಗರ ಓಡಾಟಕ್ಕೆ ತೊಡಕಾಗಿದೆ. ಆಗಾಗ ಸಣ್ಣಪುಟ್ಟ ದುರಸ್ತಿ ಕೈಗೊಳ್ಳಲಾಗಿದ್ದರೂ ನಿರಂತರ ಮಳೆಯಿಂದಾಗಿ ರಸ್ತೆ ಮತ್ತೆ ಮತ್ತೆ ಹಾಳಾಗುತ್ತಿದೆ. ಸದ್ಯ ಡಾಮಾರೀಕರಣ ಅಸಾಧ್ಯವಾದ ಕಾರಣ ಪೇವರ್ ಬ್ಲಾಕ್‌ಗಳನ್ನು ಸರಿಪಡಿಸಲು ಮುಂದಾಗಿದೆ. ಹಾಗಾಗಿ ಸಾರ್ವಜನಿಕರು, ವಾಹನಿಗರು ಸಹಕರಿಸಬೇಕು ಎಂದು ಎನ್‌ಎಚ್‌ಎಐ ಮನವಿ ಮಾಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…