Featured

ಮಂಗಳೂರು:  ಜೂ.1 ರಿಂದ ಮೀನುಗಾರಿಕೆ ನಿಷೇಧ – vishwanews24

ಮಂಗಳೂರು:  ಜೂ.1 ರಿಂದ ಮೀನುಗಾರಿಕೆ ನಿಷೇಧ

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು / ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳು ನಿಷೇದಿಸಲಾಗಿದೆ .

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮಥ್ರ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ / ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.

ಮೀನುಗಾರಿಕೆ ನಿಷೇದಿಶಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago