ಮಂಗಳೂರು, : ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶಾದ್ಯಂತ ಹಿಂಸೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇದರ ವಿರುದ್ಧ ಜೂ.16ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ.
ಅಲ್ಲದೆ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಯಾರಿಗೂ ಅನುಮತಿ ನೀಡಿಲ್ಲ ಎಂದು ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ
ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶಾದ್ಯಂತ ಹಿಂಸೆ ನಡೆಸಲಾಗುತ್ತಿದ್ದು, ಇದನ್ನು ಖಂಡಿಸಿ ಜೂ.16ರಂದು ಅಪರಾಹ್ನ 3 ಗಂಟೆಗೆ ನಗರದ ಪಿವಿಎಸ್ ವೃತ್ತದ ಬಳ ವಿಶ್ವ ಹಿಂದೂ ಪರಿಷತ್-ಬಜರಂಗ ದಳ ವತಿಯಿಂದ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸ್‌ಆಯಪ್ ಗ್ರೂಪ್‌ಗಳಲ್ಲಿ ಪೋಸ್ಟ್ ವೊಂದು ಹರಿದಾಡುತ್ತಿದೆ. ಇದನ್ನು ಗಮನಿಸಿ ಸಹಾಯಕ ಪೊಲೀಸ್ ಆಯುಕ್ತರು ಈ ಸ್ಪಷ್ಟನೆ ನೀಡಿದ್ದಾರೆ.
ಜೂ.16ರಂದು ಪ್ರತಿಭಟನೆ ನಡೆಸುವ ಕುರಿತು ಪೊಲೀಸ್ ಇಲಾಖೆಗೆ ಅಧಿಕೃತವಾಗಿ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ. ಆದಾಗ್ಯೂ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ರೀತಿಯ ಪ್ರತಿಭಟನೆಯನ್ನು ಮಾಡಲು ಅನುಮತಿ ನೀಡಿರುವುದಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತರು ಹೇಳಿದ್ದು, ಈ ಬಗ್ಗೆ ಅವರು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಿಗೆ ತಿಳುವಳಿಕೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…