Featured

ಮಂಗಳೂರು : ಜೂ.16ರಂದು ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಯಾರಿಗೂ ಅನುಮತಿ ನೀಡಿಲ್ಲ : ಸಹಾಯಕ ಪೊಲೀಸ್ ಆಯುಕ್ತರ ಸ್ಪಷ್ಟನೆ – Vishwnaews24

ಜೂ.16ರಂದು ಪ್ರತಿಭಟನೆ ನಡೆಸುವ ಬಗ್ಗೆ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ..

ಮಂಗಳೂರು, : ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶಾದ್ಯಂತ ಹಿಂಸೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಇದರ ವಿರುದ್ಧ ಜೂ.16ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುವ ಬಗ್ಗೆ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ.

ಅಲ್ಲದೆ ಯಾವುದೇ ರೀತಿಯ ಪ್ರತಿಭಟನೆ ನಡೆಸಲು ಯಾರಿಗೂ ಅನುಮತಿ ನೀಡಿಲ್ಲ ಎಂದು ಮಂಗಳೂರು ಕೇಂದ್ರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು ಸ್ಪಷ್ಟಪಡಿಸಿದ್ದಾರೆ

ಪ್ರವಾದಿಯವರ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿದವರ ವಿರುದ್ಧ ಪ್ರತಿಭಟನೆ ಹೆಸರಿನಲ್ಲಿ ದೇಶಾದ್ಯಂತ ಹಿಂಸೆ ನಡೆಸಲಾಗುತ್ತಿದ್ದು, ಇದನ್ನು ಖಂಡಿಸಿ ಜೂ.16ರಂದು ಅಪರಾಹ್ನ 3 ಗಂಟೆಗೆ ನಗರದ ಪಿವಿಎಸ್ ವೃತ್ತದ ಬಳ ವಿಶ್ವ ಹಿಂದೂ ಪರಿಷತ್-ಬಜರಂಗ ದಳ ವತಿಯಿಂದ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ವಾಟ್ಸ್‌ಆಯಪ್ ಗ್ರೂಪ್‌ಗಳಲ್ಲಿ ಪೋಸ್ಟ್ ವೊಂದು ಹರಿದಾಡುತ್ತಿದೆ. ಇದನ್ನು ಗಮನಿಸಿ ಸಹಾಯಕ ಪೊಲೀಸ್ ಆಯುಕ್ತರು ಈ ಸ್ಪಷ್ಟನೆ ನೀಡಿದ್ದಾರೆ.

ಜೂ.16ರಂದು ಪ್ರತಿಭಟನೆ ನಡೆಸುವ ಕುರಿತು ಪೊಲೀಸ್ ಇಲಾಖೆಗೆ ಅಧಿಕೃತವಾಗಿ ಯಾರೂ ಅನುಮತಿ ಕೋರಿಕೆ ಪತ್ರ ಸಲ್ಲಿಸಿಲ್ಲ. ಆದಾಗ್ಯೂ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಭದ್ರತೆಯ ಹಿತದೃಷ್ಟಿಯಿಂದ ಯಾವುದೇ ರೀತಿಯ ಪ್ರತಿಭಟನೆಯನ್ನು ಮಾಡಲು ಅನುಮತಿ ನೀಡಿರುವುದಿಲ್ಲ ಎಂದು ಸಹಾಯಕ ಪೊಲೀಸ್ ಆಯುಕ್ತರು ಹೇಳಿದ್ದು, ಈ ಬಗ್ಗೆ ಅವರು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷರಿಗೆ ತಿಳುವಳಿಕೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ.

Vishwa News 24

Recent Posts

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ – vishwanews24

ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್‌ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…

5 hours ago

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

5 hours ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

5 hours ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

5 hours ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

6 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago