ಮಂಗಳೂರು: ಮಾಜಿ ಸಚಿವ,ಜೆಡಿಎಸ್‌ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ(80) ಇಂದು ನಿಧನರಾಗಿದ್ದಾರೆ.
ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅಮರನಾಥ ಶೆಟ್ಟಿ ಅವರು ಕರಾವಳಿಯ ಹಿರಿಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದು 10 ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಈ ಪೈಕಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ.
ಚುನಾವಣೆಯಲ್ಲಿ ಗೆಲುವು ಸಾಧಿಸಿದ ಮೂರು ಬಾರಿಯೂ ಅವರು ಸಚಿವರಾಗಿದ್ದಾರೆ. ಜನತಾ ಪಕ್ಷದಿಂದ 1983ರಲ್ಲಿ ಹಾಗೂ 1985ರಲ್ಲಿ ಶಾಸಕರಾಗಿದ್ದ ಅವರು, 1994ರಲ್ಲಿ ಜನತಾ ದಳದಿಂದ ಶಾಸಕರಾಗಿದ್ದರು.
1965ರಲ್ಲಿ ತಮ್ಮ ರಾಜಕೀಯ ಜೀವನಕ್ಕೆ ಕಾಲಿಟ್ಟ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಪಂಚಾಯತ್‌ನ ಅಧ್ಯಕ್ಷರಾಗಿದ್ದರು. ಹಾಗೆಯೇ ಅವರು ಮೂಡುಬಿದಿರೆ ನಗರ ಪಂಚಾಯತ್‌ನ ಅಧ್ಯಕ್ಷರಾಗಿ, ಜನತಾ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…