Featured

ಮಂಗಳೂರು : ಜೆರೋಸಾ ಶಾಲಾ ಶಿಕ್ಷಕಿಯ ಧರ್ಮದ ಅವಹೇಳನ ಪ್ರಕರಣ –  ವಿಎಚ್ ಪಿ, ಬಜರಂಗದಳದಿಂದ ಪ್ರತಿಭಟನೆ: ಹಲವರು ಪೊಲೀಸ್ ವಶಕ್ಕೆ – Vishwanews24

ಮಂಗಳೂರು : ಹಿಂದೂ ಮುಖಂಡರು, ಶಾಸಕರ ಮೇಲೆ ದಾಖಲಿಸಿದ ಪ್ರಕರಣ ಹಿಂಪಡೆಯಬೇಕು ಹಾಗೂ ಆರೋಪಿತ ಶಿಕ್ಷಕಿಯನ್ನು ಬಂಧಿಸುವಂತೆ ಒತ್ತಾಯಿಸಿ ವಿಎಚ್ ಪಿ, ಬಜರಂಗದಳದಿಂದ ಪ್ರತಿಭಟನೆ

ಮಂಗಳೂರು: ನಗರದ ಸಂತ ಜೆರೋಸಾ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ ಹಾಗೂ ಇತರ ಮೇಲೆ ದಾಖಲಿಸಿದ ಪ್ರಕರಣ ಹಿಂಪಡೆಯಬೇಕು ಹಾಗೂ ಆರೋಪಿತ ಶಿಕ್ಷಕಿಯನ್ನು ಬಂಧಿಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಮಂಗಳೂರಿನ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನೆಯ ಸಂದರ್ಭ ಶಿಕ್ಷಕಿ ಪ್ರಭಾ ಅವರನ್ನು ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿ, ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆಯ ಸಂದರ್ಭ ಮಾತನಾಡಿದ ವಿಶ್ವ ಹಿಂದೂ ಪರಿಷತ್ ನ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಶಿವನಾನಂದ ಮೆಂಡನ್, ಸಂತ ಜೆರೋಸಾ ಶಾಲೆಯ ಶಿಕ್ಷಕಿ ಹಿಂದೂ ಧರ್ಮಕ್ಕೆ ಅವಹೇಳನ ಮಾಡಿ ಪಾಠ ಮಾಡಿದ್ದಾರೆ. ಶಿಕ್ಷಕಿಯನ್ನು ವಜಾಗೊಳಿಸುವಂತೆ ಪ್ರತಿಭಟನೆ ಮಾಡಿದ ಶಾಸಕರು, ಮನಪಾ ಸದಸ್ಯರು, ವಿಎಚ್ ಪಿ ಮುಖಂಡರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು.

ಪೊಲೀಸ್ ಆಯುಕ್ತರಿಗೆ ಮನವಿ ನೀಡಲು ಅವಕಾಶ ನೀಡಬೇಕು. ನೀಡದಿದರೂ ಮೆರವಣಿಗೆಯಲ್ಲಿ ಹೋಗುತ್ತೇವೆ ಎಂದು ಪ್ರತಿಭಟನಾಕಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ತಳ್ಳಿ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುತ್ತಾ ಮುನ್ನುಗ್ಗಲು ಪ್ರಯತ್ನಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ಡಿಸಿಪಿ ಸಿದ್ಧಾರ್ಥ್ ಗೋಯಲ್ ಅವರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕಳುಹಿಸಿದರು.ಪ್ರತಿಭಟನಾಕಾರರು ಮೆರವಣಿಗೆಗೆ ಪೂರ್ವ ಅನುಮತಿ ಪಡೆದಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

22 minutes ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

32 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 hour ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

2 hours ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago