ಮಂಗಳೂರು : ಜೆರೋಸಾ ಶಾಲೆ ಪ್ರಕರಣ – ದುರ್ವರ್ತನೆ ತೋರಿದ್ದ ವೇದವ್ಯಾಸ್ ಕಾಮತ್ , ಭರತ್ ಶೆಟ್ಟಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸ್ಪೀಕರ್ ಖಾದರ್ ಗೆ ಮನವಿ – Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಜೆರೋಸಾ ಶಾಲೆ ಪ್ರಕರಣ – ದುರ್ವರ್ತನೆ ತೋರಿದ್ದ ವೇದವ್ಯಾಸ್ ಕಾಮತ್ , ಭರತ್ ಶೆಟ್ಟಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲು ಸ್ಪೀಕರ್ ಖಾದರ್ ಗೆ ಮನವಿ

ಮಂಗಳೂರು : ಜೆರೋಸಾ ಶಾಲೆ ಪ್ರಕರಣದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ ಮತ್ತು ಡಾ.ಭರತ್ ಶೆಟ್ಟಿ ದುರ್ವರ್ತನೆ ತೋರಿದ್ದು ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಜೆಪ್ಪು ಶಾಂತಿನಗರ ನಿವಾಸಿ, ನಗರಪಾಲಿಕೆಯ ಮಾಜಿ ಸದಸ್ಯ ಕೆ.ಭಾಸ್ಕರ್ ರಾವ್‌ ಅವರು ವಿಧಾನಸಭೆಯ ಅಧ್ಯಕ್ಷ ಯು.ಟಿ. ಖಾದರ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಶಾಲೆಯ ಮುಂದೆ ಶಾಸಕರ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಮತ್ತು ನಂತರ ನಡೆದ ಘಟನಾವಳಿಗಳು ಸಮಾಜ ತಲೆತಗ್ಗಿಸುವಂತಿವೆ. ಪ್ರಚೋದನಕಾರಿ ಹೇಳಿಕೆ ನೀಡಿರುವ ಶಾಸಕರು, ಶಿಕ್ಷಕರ ಮುಂದೆ ವಿದ್ಯಾರ್ಥಿಗಳನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಶಿಕ್ಷಕರನ್ನು ಬೀದಿಯಲ್ಲಿ ನಿಲ್ಲಿಸಿ ಮಾನಸಿಕ ಮತ್ತು ದೈಹಿಕ ಹಿಂಸೆ ನೀಡಿದ್ದಾರೆ. ಶಿಕ್ಷಕಿಯ ಮೇಲೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಒತ್ತಡ ಹಾಕಿದ್ದಾರೆ. ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳಿಂದ ಪ್ರಚೋದನಕಾರಿ ಘೋಷಣೆಗಳನ್ನು ಕೂಗಿಸಿದ್ದಾರೆ. ಇದೆಲ್ಲವೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕಪ್ಪು ಚುಕ್ಕೆ. ಆದ್ದರಿಂದ ಸೂಕ್ತ ತನಿಖೆ ಆಗಬೇಕು’ ಎಂದು ಕೋರಿದ್ದಾರೆ.

ದ. ಕ. ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲುವು ಅಸಾಧ್ಯ : ರಮಾನಾಥ ರೈ – Vishwanews24

 

ಶಾಸಕರು ಸ್ವೀಕರಿಸಿದ ಪ್ರತಿಜ್ಞೆಗೆ ವಿರುದ್ಧವಾಗಿ ವರ್ತಿಸಿದರೆ ಅವರ ಮೇಲೆ ಕ್ರಮ ಕೈಗೊಳ್ಳುವ ಅಧಿಕಾರ ವಿಧಾನಸಭಾಧ್ಯಕ್ಷರಿಗೆ ಇದೆ’ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಖಾದರ್ ಅವರನ್ನು ಬೆಂಗಳೂರಿನ ಅವರ ಕಚೇರಿಯಲ್ಲಿ ಶುಕ್ರವಾರ ಭೇಟಿ ಮಾಡಿ ಭಾಸ್ಕರ್ ರಾವ್‌ ದೂರು ನೀಡಿದ್ದು, ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಜೊತೆಗಿದ್ದರು.

Leave a Reply