Featured

ಮಂಗಳೂರು : ಜೇಸಿಐ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ಪ್ರಥಮ ಸ್ಥಾನ ಪಡೆದ ನಿಧಿ ಶೆಟ್ಟಿ ಪುಳಿಂಚ -Vishwanews24

ಮಂಗಳೂರು : ಜೇಸಿಐ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆಯಲ್ಲಿ  ಪ್ರಥಮ ಸ್ಥಾನ ಪಡೆದ ನಿಧಿ ಶೆಟ್ಟಿ ಪುಳಿಂಚ -Vishwanews24

ಮಂಗಳೂರು : ಜೇಸಿಐ ಭಾರತದ 65ನೇ ರಾಷ್ಟ್ರೀಯ ಅಧಿವೇಶನದ ಪ್ರಯುಕ್ತ ಯುವ ಜೇಸಿ ಸದಸ್ಯರಿಗಾಗಿ ಆನ್ ಲೈನ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರ ಮಟ್ಟದ ಪ್ರತಿಭಾನ್ವೇಷಣಾ ಭಾಷಣ ಸ್ಪರ್ಧೆಯಲ್ಲಿ ಜೇಸಿಐ ಮಂಗಳೂರು ಇಂಪ್ಯಾಕ್ಟ್ ಘಟಕದ ಪ್ರತಿನಿಧಿಯಾಗಿ ಭಾಗವಹಿಸಿದ್ದ ನಿಧಿ ಶೆಟ್ಟಿ ಪುಳಿಂಚ ಅವರು ಪ್ರಥಮ ಸ್ಥಾನ ಗಳಿಸಿದ್ದಾರೆ.

ರಾಷ್ಟ್ರ ಮಟ್ಟದ ಪ್ರತಿಭಾನ್ವೇಷಣಾ ಭಾಷಣ ಸ್ಪರ್ಧೆಯಲ್ಲಿ ಜೇಸಿಐ ಮಂಗಳೂರು ಇಂಪ್ಯಾಕ್ಟ್ ಘಟಕದ ಪ್ರತಿನಿಧಿಯಾಗಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ ನಿಧಿ ಶೆಟ್ಟಿ ಪುಳಿಂಚ ಅವರನ್ನು ಜೇಸಿಐ ಮಂಗಳೂರು ಇಂಪ್ಯಾಕ್ಟ್ ಮತ್ತು ಜೇಸಿಐ ಮಂಗಳೂರು ಇನ್ ಸ್ಪೈರ್ ಘಟಕದ ವತಿಯಿಂದ ಜಂಟಿಯಾಗಿ ಸನ್ಮಾನಿಸಲಾಯಿತು.

ಮೋದಿ ಸರ್ಕಾರದ ದಾಳಿಯಿಂದ ತಮಿಳುನಾಡು ಸಂಸ್ಕೃತಿಯನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ : ರಾಹುಲ್ ಗಾಂಧಿ -Vishwanews24

ಜೇಸಿಐ ಮಂಗಳೂರು ಇಂಪ್ಯಾಕ್ಟ್ ಘಟಕದ ಸ್ಥಾಪಕಾಧ್ಯಕ್ಷ ದೀಪಕ್ ಗಂಗೂಲಿ, 2020ರ ಅಧ್ಯಕ್ಷ ಸೂರಜ್ ಆರ್. ಶೆಟ್ಟಿ, ಮಂಗಳೂರು ಇನ್ ಸ್ಫೈರ್ ಘಟಕದ ಸ್ಥಾಪಕಾಧ್ಯಕ್ಷೆ ಸಾರಿಕಾ ಪೂಜಾರಿ, ಕೋಶಾಧಿಕಾರಿ ಪ್ರಾರ್ಥನಾ, ನಿಧಿ ಶೆಟ್ಟಿ ಅವರ ಹೆತ್ತವರಾದ ಶ್ರೀಧರ ಶೆಟ್ಟಿ ಪುಳಿಂಚ, ಪ್ರತಿಭಾ ಶೆಟ್ಟಿ ಪುಳಿಂಚ, ಸಹೋದರ ನಿನಾದ್ ಶೆಟ್ಟಿ ಉಪಸ್ಥಿತರಿದ್ದರು.

ಮಂಗಳೂರು ಬೆಂದೂರು ಸೈಂಟ್ ತೆರೆಸಾ’ಸ್ ಸ್ಕೂಲ್ ನ ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ವಲಯ ಮಟ್ಟದಲ್ಲಿ ಆಯೋಜಿಸಲಾಗಿದ್ದ ಅರ್ಹತಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದರು‌. ಪ್ರಸ್ತುತ ಗುಜರಾತ್ ನ ವಡೋಧರಾದಲ್ಲಿ ನಡೆಯುತ್ತಿರುವ 65 ನೇ ರಾಷ್ಟ್ರೀಯ ಸಮ್ಮೇಳನದ ಪ್ರಯುಕ್ತ ಆನ್ ಲೈನ್ ಮೂಲಕ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ದೇಶದ ವಿವಿಧೆಡೆಗಳಿಂದ ಯುವ ಜೇಸಿ ಸದಸ್ಯರು ಭಾಗವಹಿಸಿದ್ದರು.

ಕುಂದಾಪುರ: ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮದಿನ ಹಿನ್ನೆಲೆ ಅಂಗವಾಗಿ ಯುವ ಬ್ರಿಗೇಡ್ ನಿಂದ ಜೈ ಹಿಂದ್ ರನ್ ಕಾರ್ಯಕ್ರಮ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

7 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

7 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

12 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

12 hours ago