Featured

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ

ಮಂಗಳೂರು: ನಗರದ ಕೊಡ್ಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಹೊರಗಿನಿಂದ ಮೊಬೈಲ್‌ ಫೋನ್‌ಗಳು, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ಸಾಮಗ್ರಿಗಳನ್ನು ಎಸೆಯುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸುವ ಉದ್ದೇಶದಿಂದ ಜೈಲಿನ ಆವರಣ ಗೋಡೆಯ ಮೇಲ್ಭಾಗದಲ್ಲಿ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಸುವ ಕಾಮಗಾರಿ ಆರಂಭವಾಗಿದೆ.

ಕಾರಾಗೃಹ ಇಲಾಖೆಯ ರೂ. 50 ಲಕ್ಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆ ಈ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಟೆಂಡರ್‌ ಸೇರಿದಂತೆ ವಿವಿಧ ಆಡಳಿತಾತ್ಮಕ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಕಳೆದ ಕೆಲ ದಿನಗಳಿಂದ ಕಾಮಗಾರಿ ಆರಂಭವಾಗಿದೆ. ಪ್ರಸ್ತುತ ಜೈಲಿನ ಸುತ್ತ ಸುಮಾರು 15 ಅಡಿ ಎತ್ತರದ ಕಲ್ಲಿನ ಆವರಣ ಗೋಡೆ ಹಾಗೂ ಅದರ ಮೇಲ್ಭಾಗದಲ್ಲಿ ಸುಮಾರು ಎರಡು ಅಡಿ ತಂತಿ ಬೇಲಿ ಇದೆ. ಆದರೂ ಕೆಲವರು ಹೊರ ರಸ್ತೆಯಲ್ಲಿ ನಿಂತು ಗಾಂಜಾ, ಮೊಬೈಲ್‌ ಹಾಗೂ ಇತರ ವಸ್ತುಗಳನ್ನು ಪ್ಲಾಸ್ಟಿಕ್‌ ಪೊಟ್ಟಣಗಳಲ್ಲಿ ಕಲ್ಲು ಕಟ್ಟಿ ಜೈಲಿನೊಳಗೆ ಎಸೆಯುತ್ತಿರುವ ಘಟನೆಗಳು ಪದೇ ಪದೇ ವರದಿಯಾಗುತ್ತಿವೆ.

ಹೊಸದಾಗಿ ನಿರ್ಮಿಸಲಾಗುತ್ತಿರುವ ತಂತಿ ಬೇಲಿ ಗೋಡೆಯ ಮೇಲಿನಿಂದ ಸುಮಾರು 12 ಅಡಿ ಎತ್ತರಕ್ಕೆ ವಿಸ್ತರಿಸಲಿದ್ದು, ಇದರ ಮೂಲಕ ಯಾವುದೇ ವಸ್ತುವನ್ನು ಒಳಗೆ ಎಸೆಯುವುದು ಬಹುತೇಕ ಅಸಾಧ್ಯವಾಗಲಿದೆ. ಜತೆಗೆ ತಂತಿಯ ಜಾಲರಿಗಳು ಅತಿ ಸಣ್ಣದಾಗಿರುವುದರಿಂದ ಸಣ್ಣ ಕಲ್ಲು ಸಹ ಒಳ ಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾ ಕಾರಾಗೃಹ ಅಧೀಕ್ಷಕ ಶರಣ ಬಸಪ್ಪ ತಿಳಿಸಿದ್ದಾರೆ.

ಜೈಲಿನ ಹೊರ ಆವರಣದ ಭದ್ರತೆಯನ್ನು ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್‌) ಸಿಬ್ಬಂದಿಗೆ ವಹಿಸಲಾಗಿದೆ. ಜೈಲಿಗೆ ಪ್ರವೇಶಿಸುವ ಪ್ರತಿಯೊಬ್ಬರನ್ನೂ ಕಡ್ಡಾಯವಾಗಿ ತಪಾಸಣೆ ನಡೆಸಿದ ಬಳಿಕವೇ ಒಳಗೆ ಬಿಡಲಾಗುತ್ತಿದೆ. ಅಕ್ರಮವಾಗಿ ಮೊಬೈಲ್‌, ಮಾದಕ ವಸ್ತುಗಳು ಹಾಗೂ ಇತರ ನಿಷೇಧಿತ ವಸ್ತುಗಳನ್ನು ಜೈಲಿನೊಳಗೆ ಸಾಗಿಸಲು ಯತ್ನಿಸಿದ ಹಲವರನ್ನು ಕೆಎಸ್‌ಐಎಸ್‌ಎಫ್‌ ಸಿಬ್ಬಂದಿ ಈಗಾಗಲೇ ಪತ್ತೆಹಚ್ಚಿ ಕ್ರಮ ಕೈಗೊಂಡಿದ್ದಾರೆ.

210 ಕೈದಿಗಳ ಸಾಮರ್ಥ್ಯ ಹೊಂದಿರುವ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಜುಲೈ 11ರ ಅಂಕಿಅಂಶಗಳ ಪ್ರಕಾರ 369 ಮಂದಿ ಕೈದಿಗಳು ಇದ್ದಾರೆ. ಸ್ಥಳಾವಕಾಶದ ಕೊರತೆಯಿಂದ 100ಕ್ಕೂ ಹೆಚ್ಚು ಕೈದಿಗಳನ್ನು ಶಿವಮೊಗ್ಗ ಸೇರಿದಂತೆ ವಿವಿಧ ಕಾರಾಗೃಹಗಳಿಗೆ ಸ್ಥಳಾಂತರಿಸಲಾಗಿದೆ. ಜೈಲಿನಲ್ಲಿರುವ ಕೈದಿಗಳಲ್ಲಿ ಶೇ.50ರಿಂದ 60ರಷ್ಟು ಮಂದಿ ಮಾದಕ ವ್ಯಸನಿಗಳಾಗಿದ್ದು, ಅವರು ವಿವಿಧ ಮಾರ್ಗಗಳ ಮೂಲಕ ಮಾದಕ ವಸ್ತುಗಳನ್ನು ಜೈಲಿನೊಳಗೆ ತರಿಸಿಕೊಳ್ಳಲು ಯತ್ನಿಸುತ್ತಾರೆ. ಈ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರಾಗೃಹ ಅಧಿಕಾರಿಗಳು ತಿಳಿಸಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago