ಮಂಗಳೂರು: ಇಲ್ಲಿನ ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30)ಗೆ ಗಾಯಗೊಂಡವರು. ಇವರಿಬ್ಬರು ಉಳ್ಳಾಲ ಠಾಣಾ ವ್ಯಾಪ್ತಿಯ ಕೇಸ್ ನಲ್ಲಿ ವಿಚಾರಣಾಧೀನ ಖೈದಿಗಳಾಗಿದ್ದಾರೆ.
ರೌಡಿ ಶೀಟರ್‌ಗಳಾಗಿರೋ ಟೋಪಿ ನೌಫಲ್ ಮತ್ತು ಗ್ಯಾಂಗ್ ನಿಂದ ಇಬ್ಬರ ಮೇಲೆ ದಾಳಿ ನಡೆದಿದೆ. ಅಡುಗೆ ಮನೆಯಲ್ಲಿದ್ದ ಕೆಲವು ಹರಿತವಾದ ವಸ್ತುಗಳಿಂದ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ತಲೆ, ಭುಜ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿರುವ ಮಾಹಿತಿ ಸಿಕ್ಕಿದೆ.
ಸದ್ಯ ಇಬ್ಬರೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಆರೋಪಿಗಳು ಮತ್ತು ಹಲ್ಲೆಗೊಳಗಾದ ಇಬ್ಬರೂ ಅನೇಕ ಪ್ರಕರಣಗಳಲ್ಲಿ ಆರೋಪಿಗಳಾಗಿದ್ದಾರೆ. ಅಲ್ಲದೇ ರೌಡಿ ಶೀಟರ್ ಗಳಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಘಟನೆ ಜೈಲಿನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕಾರಾಗೃಹದ ಅಧಿಕಾರಿಗಳ ದೂರಿನ ಮೇರೆಗೆ ಮುಫದ್ ರಿಫಾತ್ (28), ಮುಹಮ್ಮದ್ ರಿಜ್ವಾನ್ (34), ಇಬ್ರಾಹಿಂ ಕಲ್ಲೆಲ್ (30), ಉಮರ್ ಫಾರೂಕ್ ಇರ್ಫಾನ್, ಅಲ್ತಾಫ್, ನೌಫಲ್ ಹಾಗೂ ಜೈನುದ್ದೀನ್ ಮೇಲೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…