ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆದ ಆರೋಪಿಯನ್ನು ಕೆಎಸ್‌ಐಎಸ್‌ಎಫ್ ಸಿಬ್ಬಂದಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತ ಮೂಲತಃ ಬಂಟ್ವಾಳ ತಾಲೂಕಿನ ಕೊಳತ್ತಮಜಲು ಕೋಳಕೇರಿ ನಿವಾಸಿಯಾಗಿದ್ದು, ಪ್ರಸ್ತುತ ಉರ್ವದಲ್ಲಿ ವಾಸವಾಗಿರುವ ತಿಲಕ್‌ರಾಜ್ ಎಂದು ಗುರುತಿಸಲಾಗಿದೆ.
ಜುಲೈ 2ರಂದು ಮುಂಜಾನೆ ಸುಮಾರು 4.20ರ ವೇಳೆಗೆ ಆರೋಪಿ ಕಾರಾಗೃಹದ ಒಳಭಾಗದಲ್ಲಿರುವ ಅಡುಗೆಮನೆ ಪ್ರದೇಶದತ್ತ ಅನುಮಾನಾಸ್ಪದ ಪಾರ್ಸೆಲ್‌ನ್ನು ಎಸೆದಿದ್ದಾನೆ. ಈ ಕೃತ್ಯವನ್ನು ಕರ್ತವ್ಯದಲ್ಲಿದ್ದ ಕೆಎಸ್‌ಐಎಸ್‌ಎಫ್ ಆರ್‌ಪಿಸಿ ಕಿರಣ್ ಗಮನಿಸಿದ್ದು, ತಕ್ಷಣವೇ ಎಎಸ್‌ಐ ಕಿರಣ್ ಅಂಬಿಗ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸಿಬ್ಬಂದಿ ಸುಮಾರು 500 ಮೀಟರ್ ದೂರ ಆರೋಪಿಯನ್ನು ಬೆನ್ನಟ್ಟಿ ಹಿಡಿದು ವಶಕ್ಕೆ ಪಡೆದಿದ್ದಾರೆ. ನಂತರ ಉಸ್ತುವಾರಿ ಅಧಿಕಾರಿ ಪೊಲೀಸ್ ನಿರೀಕ್ಷಕ ಸುಭಾಷ್ ಅವರಿಗೆ ಮಾಹಿತಿ ನೀಡಲಾಗಿದ್ದು, ಅವರ ಸಮ್ಮುಖದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.
ಪ್ರಾಥಮಿಕ ತನಿಖೆಯ ಪ್ರಕಾರ, ಮೂಡುಶೆಡ್ಡೆ ನಿವಾಸಿ ಕಿರಣ್ ಎಂಬಾತ ಆರೋಪಿಗೆ ಗಾಂಜಾ, ಲೈಟರ್ ಹಾಗೂ ಗಾಂಜಾ ಸೇವನೆಗೆ ಬಳಸುವ ಪೇಪರ್‌ಗಳನ್ನು ನೀಡಿ, ಅವುಗಳನ್ನು ಕಾರಾಗೃಹದೊಳಗೆ ಎಸೆಯುವಂತೆ ಸೂಚಿಸಿದ್ದಾನೆ. ಇದಕ್ಕಾಗಿ ಆರೋಪಿಗೆ ರೂ. 2,000 ಹಣವನ್ನೂ ನೀಡಲಾಗಿತ್ತು ಎನ್ನಲಾಗಿದೆ. ಇದಲ್ಲದೆ, ಕಾರಾಗೃಹದಲ್ಲಿರುವ ಲಾಯ್ ವೇಗಸ್ ಎಂಬ ಬಂಧಿತನ ಮೊಬೈಲ್ ಸಂಖ್ಯೆಯನ್ನು ನೀಡಿ, ಆತನ ಸೂಚನೆಯಂತೆ ನಿಗದಿತ ಸ್ಥಳಕ್ಕೆ ಮಾದಕ ವಸ್ತುಗಳನ್ನು ಎಸೆಯಲಾಗಿದೆ ಎಂದು ಆರೋಪಿ ಬರ್ಕೆ ಪೊಲೀಸರ ವಿಚಾರಣೆ ವೇಳೆ ತಿಳಿಸಿದ್ದಾನೆ. ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ಹಿಂದಿರುವ ಜಾಲದ ಕುರಿತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್‌ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್‌ಫೀಲ್ಡ್‌ನಲ್ಲಿರುವ ಡೇಕೇರ್ ಸೆಂಟರ್…