Featured

ಮಂಗಳೂರು : ಜ್ಯುವೆಲರಿ ಮಾಲೀಕರ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ʼಆರೋಪಿ ಅರೆಸ್ಟ್ʼ  – Vishwanews24

ಮಂಗಳೂರು ಜ್ಯುವೆಲರಿ ಮಾಲೀಕರ ಕೊಲೆ ಪ್ರಕರಣ: ಕಾಸರಗೋಡಿನಲ್ಲಿ ʼಆರೋಪಿ ಅರೆಸ್ಟ್ʼ

ಮಂಗಳೂರು : ಜ್ಯುವೆಲ್ಲರಿಗೆ ನುಗ್ಗಿ ಮಾಲೀಕರ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಒಂದು ತಿಂಗಳ ಬಳಿಕ ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಳೆದ ಫೆಬ್ರವರಿ 3ರಂದು ಮಂಗಳೂರಿನ ಹಂಪನ ಕಟ್ಟೆಯಲ್ಲಿರೋ ಜುವೆಲ್ಲರಿಗೆ ನುಗ್ಗಿ ಅತ್ತಾವರ ನಿವಾಸಿ ರಾಘವ(50) ಕೊಲೆಗೈದು ಎಸ್ಕೇಪ್ ‌ಆಗಿದ್ದ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಡಿವೈಎಸ್‍ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ದರೋಡೆ ನಡೆಸುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ . ಅತ್ತಾವರ ನಿವಾಸಿ ರಾಘವ ಆಚಾರ್ಯ ಎಂಬವರು ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿತ್ತು ಎನ್ನಲಾಗಿದ್ದು, ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

5 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

6 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

7 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

7 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

7 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

7 hours ago