ಮಂಗಳೂರು : ಜ್ಯುವೆಲ್ಲರಿಗೆ ನುಗ್ಗಿ ಮಾಲೀಕರ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಭರ್ಜರಿ ಕಾರ್ಯಾಚರಣೆ ಒಂದು ತಿಂಗಳ ಬಳಿಕ ಕಾಸರಗೋಡಿನಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಕೇರಳದ ಕಲ್ಲಿಕೋಟೆಯ ಚಟ್ಟನಾಡುತ್ ಕೆಳಮನೆ ನಿವಾಸಿ ಶಿಫಾಸ್(33) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಕಳೆದ ಫೆಬ್ರವರಿ 3ರಂದು ಮಂಗಳೂರಿನ ಹಂಪನ ಕಟ್ಟೆಯಲ್ಲಿರೋ ಜುವೆಲ್ಲರಿಗೆ ನುಗ್ಗಿ ಅತ್ತಾವರ ನಿವಾಸಿ ರಾಘವ(50) ಕೊಲೆಗೈದು ಎಸ್ಕೇಪ್ ಆಗಿದ್ದ ಆರೋಪಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಕಾಸರಗೋಡು ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಡಿವೈಎಸ್‍ಪಿ ಸುಧಾಕರನ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ದರೋಡೆ ನಡೆಸುವ ಉದ್ದೇಶದಿಂದಲೇ ಕೊಲೆ ನಡೆಸಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ . ಅತ್ತಾವರ ನಿವಾಸಿ ರಾಘವ ಆಚಾರ್ಯ ಎಂಬವರು ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿತ್ತು ಎನ್ನಲಾಗಿದ್ದು, ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …
ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್ ವಿತರಣೆ ಮಂಗಳೂರು: ತಡೆಗೋಡೆ…
ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…
ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…
ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…
ಪಾನ್ ಮಸಾಲಾ, ಗುಟ್ಕಾ ಮಾರಾಟ ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…