ಮಂಗಳೂರು: ಬಿಲ್ಲವ, ಈಡಿಗ, ನಾಮಧಾರಿ ಸೇರಿದಂತೆ 26 ಪಂಗಡಗಳ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರಕಾರವನ್ನು ಆಗ್ರಹಿಸುವ ನಿಟ್ಟಿನಲ್ಲಿ ಜ. 6ರಂದು ಮಂಗಳೂರಿನ ಶ್ರೀಕ್ಷೇತ್ರ ಕುದ್ರೋಳಿಯಿಂದ ಬೆಂಗಳೂರುವರೆಗೆ ಕೈಗೊಳ್ಳಲಾಗುವ 658 ಕಿ.ಮೀ. ದೂರದ ಐತಿಹಾಸಿಕ ಪಾದಯಾತ್ರೆಯನ್ನು ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರು ಉದ್ಘಾಟಿಸಲಿದ್ದಾರೆ ಎಂದು ಕಲಬುರಗಿ ಶರಣ ಬಸವೇಶ್ವರ ಮಠದ ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಯು ಉಡುಪಿ, ಬ್ರಹ್ಮಾವರ, ಮಾಸ್ತಿಕಟ್ಟೆ ಹೊಸನಗರವಾಗಿ ತೀರ್ಥಹಳ್ಳಿ, ಸಾಗರ, ಶಿವಮೊಗ್ಗ, ಚೆನ್ನಗಿರಿ, ಶಿಕಾರಿಪುರ, ದಾವಣಗೆರೆ, ಚಿತ್ರದುರ್ಗ, ತುಮಕೂರು ಮಾರ್ಗವಾಗಿ ಬೆಂಗಳೂರು ತಲುಪಲಿದೆ. ಸುಮಾರು 35 ದಿನಗಳವರೆಗೆ ಈ ಪಾದಯಾತ್ರೆಯು ದಿನಕ್ಕೆ 20 ಕಿ.ಮೀ.ನಂತೆ ಸಾಗಲಿದೆ. ಬಳಿಕ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ತಾನು ಅಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಳ್ಳಲಿದ್ದೇನೆ ಎಂದರು.
ಸ್ಯಾಂಡಲ್ ವುಡ್ ಖ್ಯಾತ ಕಿರುತೆರೆ ನಿರ್ದೇಶಕ `ಸಯ್ಯದ್ ಅಶ್ರಫ್’ ಹೃದಯಾಘಾತದಿಂದ ನಿಧನ – Vishwanews24
ಬ್ರಹ್ಮಶ್ರೀ ನಾರಾಯಣ ಗುರು ನಿಗಮ ಸ್ಥಾಪಿಸಿ 500 ಕೋಟಿ ರೂ. ಮೀಸಲಿಡಬೇಕು. ನಮ್ಮ ಸಮುದಾಯದ ಕುಲಕಸುಬು ಶೇಂದಿ ಇಳಿಸುವಿಕೆಗೆ ರಾಜ್ಯಾದ್ಯಂತ ಅವಕಾಶ ನೀಡಬೇಕು. ಬೇರೆ ರಾಜ್ಯಗಳಿಂದಲೂ ಶೇಂದಿ ತಂದು ಮಾರಾಟಕ್ಕೆ ಅವಕಾಶ ಮಾಡಬೇಕು. ಬಿಲ್ಲವ ಸಮುದಾಯ ಈಗ 2ಎ ಮೀಸಲಾತಿ ಕೆಟಗರಿಯಲ್ಲಿದೆ.
ಬೇರೆ ಸಮುದಾಯದವರಿಗೂ 2ಎ ಕೆಟಗರಿಯನ್ನು ಸರಕಾರ ನೀಡುವುದಾದಲ್ಲಿ ಈಗ ಇರುವ ನಮ್ಮ ಮೀಸಲಾತಿಯನ್ನು ಹೆಚ್ಚಳ ಮಾಡಿಕೊಂಡು ಬೇಕಾದರೆ ನೀಡಲಿ. ಸಿಗಂಧೂರು ಶ್ರೀ ಚೌಡೇಶ್ವರಿ ದೇವಾಲಯವನ್ನು ಸರಕಾರ ತನ್ನ ವಶಕ್ಕೆ ತೆಗೆದುಕೊಳ್ಳದಂತೆ ರಾಜಕೀಯದಲ್ಲಿ ಪ್ರಾತಿನಿಧ್ಯ ನೀಡಲು ಬಿಲ್ಲವ, ಈಡಿಗ ಸೇರಿದಂತೆ ನಮ್ಮ ಸಮುದಾಯದ ಮೂವರು ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಈ ಪಾದಯಾತ್ರೆ ನಡೆಸಲಾಗುತ್ತದೆ ಎಂದು ಡಾ.ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…